ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ
ಧಾರವಾಡ: ಮೈಸೂರಿನ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ (ಕೆಎಸ್ಐಸಿ) ವತಿಯಿಂದ 28ರ ವರೆಗೆ ಇಲ್ಲಿನ ಭಾವಸಾರ ಮಂಗಲ ಕಾರ್ಯಾಲಯದಲ್ಲಿ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಂಡಿದೆ.
ಜಿಲ್ಲಾಧಿಕಾರಿ ಸಮೀರ ಶುಕ್ಲ ಹಾಗೂ ತಹಸೀಲ್ದಾರ್ ಎಸ್.ಎಸ್. ಬಳ್ಳಾರಿ ಸಮಾರಂಭಕ್ಕೆ ಗುರುವಾರ ಚಾಲನೆ ನೀಡಿದರು. ಕೆಎಸ್ಐಸಿ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಎಸ್. ಫಿಲೋಮೆನ್ ಅವರು ಜಿಲ್ಲಾಧಿಕಾರಿ, ತಹಸೀಲ್ದಾರ್ ಹಾಗೂ ಗ್ರಾಹಕರಿಗೆ ಮೈಸೂರು ಸಿಲ್ಕ್ ಸೀರೆಗಳ ಬಗ್ಗೆ ಮಾಹಿತಿ ನೀಡಿದರು. 1912ರಲ್ಲಿ ಆರಂಭವಾದ ಸಂಸ್ಧೆ ಇದೀಗ ಶತಮಾನೋತ್ಸವದ ಹೊಸ್ತಿಲಲ್ಲಿದೆ. ಈ ಸಂಭ್ರಮಾಚರಣೆಗೆ ಸರ್ಕಾರ 5 ಕೋಟಿ ಅನುದಾನ ನೀಡಿದ್ದು, ಇದೇ ಡಿಸೆಂಬರ್ ತಿಂಗಳೊಳಗಾಗಿ ವಿವಿಧ ಕಾರ್ಯಕ್ರಮ ಆಚರಿಸುತ್ತೇವೆ. ಇದರಂಗವಾಗಿ ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಫ್ಯಾಶನ್ ಷೋ ಸಹ ನಡೆಸುವ ಚಿಂತನೆ ಇದೆ ಎಂದರು. ಈ ವರ್ಷ ರಾಜ್ಯದ ಐದು ಕಡೆಗಳಲ್ಲಿ ಪ್ರದರ್ಶನ ಮತ್ತು ಮಾರಾಟ ಆಯೋಜಿಸಿದ್ದು, ಹುಬ್ಬಳ್ಳಿಯಲ್ಲಿ ಶಾಶ್ವತ ಮಳಿಗೆ ತೆರೆಯುವ ಉದ್ದೇಶವಿದೆ. ಇದಕ್ಕಾಗಿ ಜಿಲ್ಲಾಧಿಕಾರಿಗಳು ಜಾಗ ನೀಡುವ ಭರವಸೆ ನೀಡಿದ್ದಾರೆ ಎಂದರು.
ಕಳೆದ ವರ್ಷ ರು. 105 ಕೋಟಿ ವಹಿವಾಟು ನಡೆಸಿದ್ದು, ಈ ವರ್ಷ ರು. 125 ಕೋಟಿ ವಹಿವಾಟು ನಡೆಸುವ ಗುರಿ ಇದೆ. ಶತಮಾನೋತ್ಸವದ ಅಂಗವಾಗಿ ಸರ್ಕಾರ ಶತಮಾನೋತ್ಸವ ಭವನ ರು. 2 ಕೋಟಿ ಬಿಡುಗಡೆ ಮಾಡಿದ್ದು, ಸಂಸ್ಥೆಯ ಹೆಚ್ಚುವರಿ ರು. 65 ಲಕ್ಷ ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿದೆ ಎಂದು ಫಿಲೋಮೆನ್ ಹೇಳಿದರು. ತಹಸೀಲ್ದಾರ್ ಎಸ್.ಎಸ್. ಬಳ್ಳಾರಿ ಮಾತನಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

