ಧಾರವಾಡ

ಕಾರ್ಗಿಲ್ ವಿಜಯೋತ್ಸವ: ರ್ಯಾಲಿ

Published On :

ಹುಬ್ಬಳ್ಳಿ: ಕಾರ್ಗಿಲ್ ವಿಜಯೋತ್ಸವ ಹಾಗೂ ವೀರ ಸೈನಿಕರ ಸ್ಮರಣೆ ಅಂಗವಾಗಿ ಶ್ರೀ ಗಜಾನನ ಮಹಾಮಂಡಳ ವತಿಯಿಂದನಗರದಲ್ಲಿ ಶುಕ್ರವಾರ ರ್ಯಾಲಿ ಆಯೋಜಿಸಲಾಗಿತ್ತು.
ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ನಿವೃತ್ತ ಮೇಜರ್ ಬಿ.ಎ. ದೊಡ್ಡಮನಿ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವೀರ ಯೋಧರ ಬಗ್ಗೆ ಮಾಹಿತಿ ನೀಡುವ ಹಾಗೂ ವಿದ್ಯಾರ್ಥಿಗಳು ಸೇನೆ ಸೇರುವಂತೆ ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು.
ವೀರಯೋಧರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಅತಿಥಿಯಾಗಿದ್ದ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಹೇಳಿದರು. ಮಹಾಮಂಡಳದ ಅಧ್ಯಕ್ಷ ಡಿ. ಗೋವಿಂದರಾವ್ ನೇತೃತ್ವದಲ್ಲಿ ನಡೆದ ರ್ಯಾಲಿಯಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ ರ್ಯಾಲಿ ನಡೆಯಿತು. ಎಸ್‌ಜೆಎಂವಿಎಸ್ ಕಲಾ ಹಾಗೂ ವಾಣಿಜ್ಯ ಮಹಿಳಾ ಕಾಲೇಜಿನ ಶಿಕ್ಷಕರಾದಸಿಸಿಲಿಯಾ ಡಿಕ್ರೂಸ್, ಸ್ಮೀತಾ ಪಾಟೀಲ, ಸುನಿತಾ ಬಟ್ಟೂರ, ನೀತಾ ಬಾಳೆಹೊಸೂರ, ಲ್ಯಾಮಿಂಗಟನ್ ಶಾಲೆಯ ಪ್ರಾಂಶುಪಾಲ ವಿ.ಟಿ. ಚಾಕಲಬ್ಬಿ, ಎನ್.ಬಿ. ಚಿಂಚಲಿ, ಟಿ.ಎಂ. ವಿಶ್ವನಾಥ, ಮಹಾಮಂಡಳದ ಪದಾಧಿಕಾರಿಗಳಾದ ಎಂ.ಆರ್. ಪಾಟೀಲ, ಅನಿತಾ ಗುಂಜಾಳ, ಶಕುಂತಲಾ ಶೆಟ್ಟಿ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.