ಧಾರವಾಡ

ಅಟಲ್‌ಜೀ ಜನಸ್ನೇಹಿ ಕೇಂದ್ರದ ಸಮಸ್ಯೆ ಪರಿಹರಿಸಿ

Published On :

ಧಾರವಾಡ: ಬಿಜೆಪಿ ಪಕ್ಷ ಜನಸಾಮಾನ್ಯರಿಗೆ ಅನುಕೂಲವಾಗುವ ದೃಷ್ಠಿಯಿಂದ ಜಾರಿಗೆ ತಂದಿರುವ ಅಟಲ್‌ಜೀ ಜನಸ್ನೇಹಿ ಕೇಂದ್ರದಲ್ಲಿ ಸಂಭವಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಬಿಜೆಪಿ ಜಿಲ್ಲಾ ಸ್ಲಂ ಮೋರ್ಚಾ ಮಾಜಿ ಅಧ್ಯಕ್ಷ ಮಾರುತಿ ನಾಯ್ಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ತಹಸೀಲ್ದಾರ್ ಕಚೇರಿಗಳಲ್ಲಿರುವ ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಯೋಜನೆ ಸಾರ್ವಜನಿಕರಿಗೆ ಸೂಕ್ತ ರೀತಿ ಕೈಗೆಟುಕುತ್ತಿಲ್ಲ. ಅಲ್ಲದೇ, ಈ ಕೇಂದ್ರಕ್ಕೆ ಆಗಮಿಸಿದ ಸಾರ್ವಜನಿಕರಿಗೆ ಅಧಿಕಾರಿಗಳು ಕೇಂದ್ರದಲ್ಲಿ ಹಲವು ತೊಂದರೆಗಳಿವೆ. ಅವು ನಿವಾರಣೆಯಾಗುವವರೆಗೂ ಯಾವುದೇ ಕಾರ್ಯವನ್ನು ಮಾಡಲಾಗದು ಎಂಬ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಬಿಎಸ್ಸೆನ್ನೆಲ್, ಹೆಸ್ಕಾಂನಿಂದಾಗುವ ಸಮಸ್ಯೆಗೆ ಜಿಲ್ಲಾಧಿಕಾರಿ ಪರಿಹಾರ ಒದಗಿಸಬೇಕು. ಕೇಂದ್ರಕ್ಕೆ ಜನರೇಟರ್ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರು ಕೇಂದ್ರದ ಸದ್ಬಳಕೆ ಮಾಡಿಕೊಳ್ಳಬೇಕೆಂದು ಮಾರುತಿ ನಾಯ್ಕ ಮನವಿಯಲ್ಲಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.