ಧಾರವಾಡ

ಧಾರವಾಡ: ಇಂದು ಬಿಚ್ಚಿಟ್ಟ ಬದುಕು ಪುಸ್ತಕ ಪರಿಚಯ

Published On :

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಜು. 30ರಂದು ಸಂಜೆ 6ಕ್ಕೆ ರಾ.ಹ ದೇಶಪಾಂಡೆ ಸಭಾಭವನದಲ್ಲಿ ಕರ್ನಲ್ ರಾಜಶೇಖರ ಒಡೆಯರ್ ಆತ್ಮಕಥೆ ಬಿಚ್ಚಿಟ್ಟ ಬದುಕು ಇಂಗ್ಲಿಷ್ ಮೂಲ ಃ್ಟ ಖಜ್ಜ್ಠಜಡಿಡ ಪುಸ್ತಕ ಪರಿಚಯ ಕುರಿತ ಕಾರ್ಯಕ್ರಮ ಏರ್ಪಡಿಸಿದೆ. ಭಾರತೀಯ ವಾಯುಸೇನೆಯ ನಿವೃತ್ತ ಅಧಿಕಾರಿ ವಸಂತ ವಾಯಿ ಕೃತಿ ಕುರಿತು ಮಾತನಾಡಲಿದ್ದಾರೆ.
ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ.ಎಸ್.ಎಂ. ವೃಷಭೇಂದ್ರಸ್ವಾಮಿ ವಹಿಸುತ್ತಾರೆ. ಸಾಹಿತಿಗಳು, ಕಲಾವಿದರು, ವಿದ್ಯಾರ್ಥಿಗಳು, ಸಂಘದ ಸದಸ್ಯರು, ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.

--
ನೀರಿಗಾಗಿ ಹೋರಾಟ: ಸಂಧಾನ ಸಫಲ
ಹುಬ್ಬಳ್ಳಿ: ಕಳೆದ 12 ವರ್ಷಗಳಿಂದ ಶುದ್ಧ ಕುಡಿಯುವ ನೀರಿಗಾಗಿ ಇಲ್ಲಿನ ಸತ್ತೂರು ಪ್ರದೇಶದ ವಿವಿಧ ಬಡಾವಣೆಗಳ ನಾಗರಿಕರು ನಡೆಸಿಕೊಂಡು ಬಂದಿದ್ದ ಹೋರಾಟ ಶಾಸಕ ಅರವಿಂದ ಬೆಲ್ಲದ ಅವರ ಸಂಧಾನದಲ್ಲಿ ಪರಿಹಾರವಾಗಿದೆ.
ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆಯಲ್ಲಿ ಸತ್ತೂರು ಪ್ರದೇಶದ ಮತ್ತು ಹುಡಾ ಅಭಿವೃದ್ಧಿಪಡಿಸಿದ ಬಡಾವಣೆಗಳ ನಾಗರಿಕರು ಮತ್ತು ಅಧಿಕಾರಿಗಳ ಸಭೆಯಲ್ಲಿ ಜಲ ಮಂಡಳಿಯಿಂದ ಕುಡಿಯುವ ನೀರು ಪಡೆಯುವುದಕ್ಕೆ ಪ್ರತಿ ಚದರ ಅಡಿಗೆ ರು. 76 ಪಾವತಿಸುವ ಪ್ರಸ್ತಾವನೆ ಕೈಬಿಟ್ಟು ಒಟ್ಟು ಪ್ರದೇಶದ ವ್ಯಾಪ್ತಿಗೆ ಅನುಗುಣವಾಗಿ ಜಲಮಂಡಳಿಗೆ ಹಣ ಪಾವತಿಸುವ ತೀರ್ಮಾನಕ್ಕೆ ಬರಲಾಯಿತು. ಕುಡಿಯುವ ನೀರಿನ ಸಮಸ್ಯ್ನೆ ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಸಕ ಅರವಿಂದ ಬೆಲ್ಲದ ಅವರಿಗೆ ಸತ್ತೂರು ಪ್ರದೇಶ ವಿವಿಧ ಬಡಾವಣೆಗಳ ನಾಗರಿಕ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.