134 ಮಕ್ಕಳನ್ನು ತೊರೆದ ಪ್ರಕರಣ ದಾಖಲು
ಹುಬ್ಬಳ್ಳಿ: ಕಳೆದ ವರ್ಷ ಧಾರವಾಡ ಜಿಲ್ಲೆಯಲ್ಲಿ ಏನಿಲ್ಲವೆಂದರೂ 134 ಮಕ್ಕಳನ್ನು ತೊರೆದಿರುವ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 60 ಗಂಡು ಮತ್ತು 74 ಹೆಣ್ಣು ಮಕ್ಕಳನ್ನು ಪಾಲಕರು ತೊರೆದಿದ್ದಾರೆ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶಂಕರ ಲಮಾಣಿ ಹೇಳಿದರು. ಮಂಗಳವಾರ ಕರ್ನಾಟಕ, ಆಂಧ್ರಪ್ರದೇಶ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಮಕ್ಕಳ ಕಲ್ಯಾಣ ಸಮಿತಿಗಳಿಗೆ ಸರ್ಕಾರೇತರ ಸಂಸ್ಥೆ ಸಾಥಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಕಳೆದ ವರ್ಷ ಜಿಲ್ಲೆಯಲ್ಲಿ ನವಜಾತ ಶಿಶುವಿನಿಂದ ಹಿಡಿದು 14 ವರ್ಷದೊಳಗಿನ 362ಕ್ಕಿಂತ ಹೆಚ್ಚು ಮಕ್ಕಳನ್ನು ವಿವಿಧ ರೀತಿಯಲ್ಲಿ ಹಿಂಸಿಸಿದ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು. ಮಕ್ಕಳ ಮೇಲೆ ನಡೆಯುವ ಹಲ್ಲೆ ಮತ್ತು ಹಿಂಸಾ ಪ್ರಕರಣಗಳ ವಿಚಾರಣೆ ವೇಳೆ ಪೊಲೀಸ್ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲ ಇಲಾಖೆಗಳೊಂದಿಗೆ ಒಟ್ಟಿಗೆ ಸೇರಿ ಕೆಲಸ ಮಾಡಲಾಗುತ್ತಿದೆ. ಇದರಿಂದಾಗಿ ಸಂಬಂಧಿಸಿದ ಇಲಾಖೆಗಳಿಗೆ ಪ್ರಕರಣದ ಪೂರ್ಣ ಮಾಹಿತಿ ಇರಲಿ ಎನ್ನುವ ಉದ್ದೇಶದಿಂದ ಈ ವಿಧಾನ ಅನುಸರಿಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಬಿ. ಉಷಾ, ಚೈಲ್ಡ್ರೈಟ್ಸ್ ಟ್ರಸ್ಟ್ ಅಧ್ಯಕ್ಷ ನರಸಿಂಗ ರಾವ್ ಸೇರಿದಂತೆ ಮಕ್ಕಳ ಕಲ್ಯಾಣ ಸಮಿತಿಯ ವಿವಿಧ ಪದಾಧಿಕಾರಿಗಳು ಇದ್ದರು.
ಇಂದು ಆಯ್ಕೆ: ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ನಾಲ್ಕು ರಾಜ್ಯಗಳ ಮಕ್ಕಳ ಕಲ್ಯಾಣ ಸಮಿತಿಗಳಲ್ಲಿ ಅತ್ಯುತ್ತಮ ಕೆಲಸ ಮಾಡಿದ ಮಕ್ಕಳ ಕಲ್ಯಾಣ ಸಮಿತಿಯನ್ನು ಜು. 31ರಂದು ಆಯ್ಕೆ ಮಾಡಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

