ಲಕ್ಷ್ಮೀ ಬಾಯಿಗೆ ಅವಮಾನ: ಪ್ರತಿಭಟನೆ
ಹುಬ್ಬಳ್ಳಿ: ಸಿಬಿಎಸ್ಇ ಪಠ್ಯಕ್ರಮದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಝಾನ್ಸಿ ರಾಣಿ ಲಕ್ಷ್ಮೀಬಾಯಿಗೆ ಅವಮಾನ ಮಾಡಿರುವುದರ ಜೊತೆಗೆ ಇತಿಹಾಸ ತಿರುಚುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿ ಶ್ರೀರಾಮ ಸೇನಾ ಕಾರ್ಯಕರ್ತರು ಮಂಗಳವಾರ ಕಿತ್ತೂರು ಚನ್ನಮ್ಮ ಸರ್ಕಲ್ನಲ್ಲಿ ಪ್ರತಿಭಟನೆ ಮಾಡಿದರು.
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಝಾನ್ಸಿ ರಾಣಿ ಹುಕ್ಕಾ ಹಿಡಿದಿರುವ ಚಿತ್ರ ಮತ್ತು ಕಾಂಗ್ರೆಸ್ನ ಯುವರಾಜ ರಾಹುಲ್ ಗಾಂಧಿಯನ್ನು ದೇಶಭಕ್ತರ ಸಾಲಿನಲ್ಲಿ ನಿಲ್ಲಿಸಿ ಪಠ್ಯದಲ್ಲಿ ಗುಣಗಾನ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆ ಮುಖ್ಯಸ್ಥ ಪ್ರಮೋದ ಮುತಾಲಿಕ್, ಎನ್ಸಿಇಆರ್ಟಿ ಮತ್ತು ಸಿಬಿಎಸ್ಇ ಬೋರ್ಡ್ನಿಂದ ಭಾರತೀಯ ಇತಿಹಾಸಕ್ಕೆ ಘೋರ ಅವಮಾನನವಾಗಿದೆ. ಕೂಡಲೇ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಹುಕ್ಕಾ ಹಿಡಿದಿರುವ ಚಿತ್ರ ಮತ್ತು ರಾಹುಲ್ ಗಾಂಧಿ ಕುರಿತು ಇರುವ ಪಠ್ಯವನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ, ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಪ್ರತಿಭಟನೆಯಲ್ಲಿ ಕುಮಾರ ಹಕಾರಿ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

