ಧಾರವಾಡ

ನಿರಂತರ ಮಳೆಗೆ ಕುಸಿದುಬಿದ್ದ ಕುರುವಿನಕೊಪ್ಪ ಶಾಲಾ ಕೊಠಡಿ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜು. 31
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಸರ್ಕಾರಿ ಪ್ರೌಢಶಾಲೆ ಒಂದು ಕೊಠಡಿ ಕುಸಿದಿದ್ದು, ಇನ್ನೆರಡು ಕೊಠಡಿಗಳು ಕುಸಿಯುವ ಸ್ಥಿತಿಯಲ್ಲಿವೆ.
ಕಳೆದ ಮೂರು ವರ್ಷಗಳ ಹಿಂದೆ ಕುರುವಿನಕೊಪ್ಪ ಗ್ರಾಮದಲ್ಲಿ ಆರಂಭವಾದ ಸರ್ಕಾರಿ ಪ್ರೌಢಶಾಲೆ, ಇಲ್ಲಿನ ಪ್ರಾಥಮಿಕ ಶಾಲೆಯ ನಾಲ್ಕು ಕೊಠಡಿಗಳಲ್ಲಿ ತಾತ್ಕಾಲಿಕವಾಗಿ ನಡೆಯುತ್ತಿತ್ತು. ಬುಧವಾರ ಏಕಾಏಕಿ ಶಾಲೆಯ ಒಂದು ಕೊಠಡಿಯ ಕುಸಿದು ಬಿದ್ದ ಪರಿಣಾಮ ಕೊಠಡಿ ಇಲ್ಲದಂತಾಗಿದ್ದು, ಇನ್ನುಳಿದ ಎರಡು ಕೊಠಡಿಗಳು ಬೀಳುವ ಸ್ಥಿತಿಯಲ್ಲಿರುವ ಕಾರಣ ಶಿಕ್ಷಕರು ಹತ್ತಿರದ ದೇವಸ್ಥಾನಗಳಲ್ಲಿ ಪಾಠ ಮಾಡಿದ್ದಾರೆ ಮತ್ತು ಕೆಲವು ತರಗತಿಗಳ ವಿದ್ಯಾರ್ಥಿಗಳು ಇನ್ನೊಂದು ಮಂದಿರದಲ್ಲಿ ಪರೀಕ್ಷೆ ಬರೆದಿದ್ದಾರೆ.
ಸರ್ಕಾರಿ ಪ್ರೌಢಶಾಲೆಗೆ ಸ್ವಂತ ಕಟ್ಟಡ ನಿರ್ಮಿಸುವುದಕ್ಕೆ ಸರ್ಕಾರ ಅನುದಾನ ನೀಡಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಆದರೆ, ಗ್ರಾಮದಲ್ಲಿ ಜಾಗ ಲಭ್ಯವಿಲ್ಲದ ಕಾರಣ ಹೈಸ್ಕೂಲ್ ನಿರ್ಮಾಣ ಕಾಮಗಾರಿ ಆರಂಭವಾಗಿಲ್ಲ.  
ಶತಮಾನದ ಶಾಲೆ: 1914ರಲ್ಲಿ ಕುರುವಿನಕೊಪ್ಪ ಪ್ರಾಥಮಿಕ ಶಾಲೆಯನ್ನು ನಿರ್ಮಿಸಲಾಗಿದ್ದು ಅಲ್ಲಿಂದ ಇಲ್ಲಿಯವರೆಗೆ ಶಾಲೆಯ ನವೀಕರಣ ಮತ್ತಿತರ ಕೆಲಸಗಳು ನಡೆದೇ ಇಲ್ಲ. ಶತಮಾನೋತ್ಸವ ಆಚರಿಸಿರುವ ಶಾಲೆಯನ್ನು ನವೀಕರಣಗೊಳಿಸಬೇಕು ಎಂದು ಗ್ರಾಮಸ್ಥರು ಹಲವಾರು ಬಾರಿ ಡಿಡಿಪಿಐ, ಬಿಇಓ ಸೇರಿದಂತೆ ಶಾಸಕ ಸಂತೋಷ ಲಾಡ್ ಅವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.