ಪರಿಸರ ಜಾಗೃತಿ ಆಂದೋಲನಕ್ಕೆ ಚಾಲನೆ
ಧಾರವಾಡ: ಪರಿಸರ ಮತ್ತು ಅರಣ್ಯ ಸಚಿವಾಲಯ, ರಾಜ್ಯ ವಿಜ್ಞಾನ ಪರಿಷತ್, ಕಪ್ಪತೇಶ್ವರ ಆಯುರ್ವೇದ ಸಂಶೋಧನಾ ಮತ್ತು ಚಿಕಿತ್ಸಾ ಸಮಿತಿ, ವಿನೂತನ ಸೇವಾ ಸಂಸ್ಥೆ ಸಹಯೋಗದಲ್ಲಿ ಭೈರಿದೇವರಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಜೀವಿವೈವಿಧ್ಯ ಸಂರಕ್ಷಣೆ ಕೇಂದ್ರ ವಿಷಯದಡಿಯಲ್ಲಿ ಪರಿಸರ ಜಾಗೃತಿ ಆಂದೋಲನಕ್ಕೆ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ಪರಿಸರದ ಅವಿಭಾಜ್ಯ ಅಂಗವಾಗಿರುವ ಮಾನವರು ತಾನೂ ಪರಿಸರದ ಕೂಸು ಎಂಬುದನ್ನು ಮರೆತು ಅದನ್ನು ನಾಶ ಮಾಡಲು ಹೊರಟಿದ್ದಾರೆ. ಪರಿಸರ ಮನುಷ್ಯನ ತಾಯಿಯಾಗಿದ್ದು, ಅದನ್ನು ಜವಾಬ್ದಾರಿಯುತವಾಗಿ ರಕ್ಷಿಸುವ ಹೊಣೆ ನಮ್ಮೆಲ್ಲರದ್ದು ಎಂದರು. ಆಂದೋಲನದ ನೇತೃತ್ವ ವಹಿಸಿದ್ದ ಪರಿಸರವಾದಿ ಲಿಂಗರಾಜ ರಾಮಾಪುರ ಮಾತನಾಡಿದರು.
ಶಾಲೆಯ ಮುಖ್ಯೋಪಾಧ್ಯಾಪಕ ಓ.ಪಿ. ಬೆಣಗಿ ಅಧ್ಯಕ್ಷತೆ ವಹಿಸಿದ್ದರು. ವಿನೂತನ ಸೇವಾ ಸಂಸ್ಥೆಯ ಕಾರ್ಯದರ್ಶಿ ಲಿಂಗರಾಜ ನಿಡುವಣಿ ಪ್ರಾಸ್ತಾವಿಕ ಮಾತನಾಡಿದರು. ಲೀಲಾ ಬಡಿಗೇರ, ಈರಣ್ಣ ಕಾಂಬ್ಳೆ, ಸತೀಶ ಗಗ್ರೆನವರ, ಶಿವಾನಂದ ಮಾಯಕಾರ, ಮಂಜು ಅರಳೀಕಟ್ಟಿ ಇದ್ದರು. ವೈ.ಎಲ್. ಬಣವಿ ಸ್ವಾಗತಿಸಿ, ಬಣಕಾರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

