ಧಾರವಾಡ

ಅವ್ಯವಹಾರ: ಪ್ರತಿಭಟನೆ

Published On :

ಕುಂದಗೋಳ: ತಾಲೂಕಿನ ಮತ್ತಿಗಟ್ಟಿ ಗ್ರಾಮ ಪಂಚಾಯ್ತಿ ಅನುದಾನವನ್ನು ದುರುಪಯೂಗ ಪಡಿಸಿಕೊಂಡು ಭಾರಿ ಪ್ರಮಾಣದಲ್ಲಿ ಅವ್ಯವಹಾರ ನಡಿದಿದೆ ಎಂದು ಆರೋಪಿಸಿ ಗ್ರಾಮಸ್ಥರು ಗ್ರಾಪಂಗೆ ಮುತ್ತಿಗೆ ಹಾಕಿ, ಬೀಗಜಡಿದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಗಡಿಭಾಗದಲ್ಲಿರುಮ ಮತ್ತಿಗಟ್ಟಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ, ಜಲಾನಯನ ಹಾಗೂ ವಸತಿ ಯೋಜನೆಗಳಲ್ಲಿ ಭಾರಿ ಪ್ರಮಾಣದ ಅವ್ಯವಹಾರವಾಗಿದ್ದು, ಇದರಲ್ಲಿ ಜನಪ್ರತಿನಿಧಿಗಳು ಪಿಡಿಓ ಜೊತೆ ಶಾಮೀಲಾಗಿ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಲಕ್ಷಾಂತರ ಹಣ ದುರುಪಯೋಗಿಸಿಕೊಂಡಿದ್ದಾರೆ ಎಂದು ಗ್ರಾಮದ ಯುವಕರು ದೂರಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವಾರು ದಿನಗಳಿಂದ ಗ್ರಾಪಂ ಪಿಡಿಓರನ್ನು ಪ್ರಶ್ನಿಸಿದರೆ ನಮ್ಮ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಅಲ್ಲದೆ, ಸರ್ವಾಧಿಕಾರಿಯಂತೆ ವರ್ತಿಸುತ್ತಿರುವುದರಿಂದ ಯುವಕರು ಆಕ್ರೋಶಗೊಂಡು ಪಿಡಿಓ ಮನಿಯಾರ್‌ಗೆ ದಿಗ್ಬಂಧನ ಹಾಕಿ ಪ್ರತಿಭಟಿಸಿದರು. ಆಗ ಸ್ಥಳಕ್ಕಾಗಮಿಸಿದ ತಾಪಂ ಅಧಿಕಾರಿ ಹುದ್ದಾರ ಈ ಕುರಿತು ತನಿಖೆ ನಡೆಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ಗ್ರಾಮದ ಪಿಡಿಓ ಅನ್ನು ಬೇರೆಡೆಗೆ ವರ್ಗಾಯಿಸಿದ್ದಾಗಿ ಹುದ್ದಾರ ತಿಳಿಸಿದರು. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.