ಧಾರವಾಡ

ಫುಟ್‌ಪಾತ್ ವ್ಯಾಪಾರಸ್ಥರ ತೆರವು

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜೂ. 4
ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಮಂಗಳವಾರವೂ ಮುಂದುವರೆಸಿದ ಮಹಾನಗರ ಪಾಲಿಕೆ ಅಧಿಕಾರಿಗಳು, ಫುಟ್‌ಪಾತ್ ಮೇಲಿನ 100ಕ್ಕೂ ಹೆಚ್ಚು ವ್ಯಾಪಾರಸ್ಥರನ್ನು ತೆರವುಗೊಳಿಸಿದರು.
ಸ್ಟೇಶನ್ ರಸ್ತೆಯ ಅಂಬೇಡ್ಕರ್ ವೃತ್ತದಿಂದ ಸಿಬಿಟಿ ವರೆಗಿನ ರಸ್ತೆಯ ಎರಡೂ ಇಕ್ಕೆಲಗಳಲ್ಲಿನ ಫುಟ್‌ಪಾತ್ ಮೇಲಿದ್ದ ಅಂಗಡಿಗಳು ತೆರವುಗೊಂಡವು. 'ಕನ್ನಡಪ್ರಭ' ಪ್ರಕಟಿಸಿದ 'ಪುಟ್‌ಪಾತ್ ಹೈಜಾಕ್‌' ವಿಶೇಷ ಸರಣಿ ವರದಿಗೆ ಸ್ಪಂದಿಸಿದ ಪಾಲಿಕೆ ಅಧಿಕಾರಿಗಳು, ಫುಟ್‌ಪಾತ್ ಅತಿಕ್ರಮಣದ ವಿರುದ್ಧ ಕಾರ್ಯಾಚರಣೆ ಪ್ರಾರಂಭಿಸುವ ಮೂಲಕ ಪಾದಚಾರಿಗಳ ಸಮಸ್ಯೆಗೆ ಸ್ಪಂದಿಸಿದ್ದಾರೆ.
ವಸ್ತು ವಶಕ್ಕೆ: ಫುಟ್‌ಪಾತ್ ಮೇಲೆ ವ್ಯಾಪಾರಕ್ಕಿಟ್ಟಿದ್ದ ಬಟ್ಟೆ, ಚಪ್ಪಲಿ ಮತ್ತಿತರ ವಸ್ತುಗಳನ್ನು ಪಾಲಿಕೆ ಸಿಬ್ಬಂದಿ ವಶಕ್ಕೆ ತೆಗೆದುಕೊಂಡಿದ್ದಾರೆ. ಕೆಲ ಪಾನ್‌ಶಾಪ್ ಅಂಗಡಿಗಳನ್ನೂ ಪಾಲಿಕೆ ಸಿಬ್ಬಂದಿ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಬುಧವಾರದಿಂದ ಫುಟ್‌ಪಾತ್ ಮೇಲೆ ವ್ಯಾಪಾರ ಪ್ರಾರಂಭಿಸುವುದಿಲ್ಲವೆಂದು ಮನವಿ ಮಾಡಿಕೊಂಡಿರುವ ಪಾನ್ ಅಂಗಡಿಗಳಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿ, ಬುಧವಾರ ಬೆಳಗ್ಗೆಯೊಳಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದಾರೆ. ಫುಟ್‌ಪಾತ್ ಮೇಲೆ ವ್ಯಾಪಾರಕ್ಕೆ ಇಟ್ಟಿದ್ದ ವಸ್ತುಗಳನ್ನು ಪಾಲಿಕೆ ಸಿಬ್ಬಂದಿ ವಶಕ್ಕೆ ತೆಗೆದುಕೊಳ್ಳುತ್ತಿದ್ದಂತೆಯೇ ಬಹುತೇಕ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಫುಟ್‌ಪಾತ್ ಮೇಲಿಟ್ಟಿದ್ದ ವ್ಯಾಪಾರದ ವಸ್ತುಗಳನ್ನು ತೆರವುಗೊಳಿಸಿದರು.
ಎಚ್ಚರಿಕೆ: ಹೊಟೇಲ್ ಎದುರಿಗಿಟ್ಟಿದ್ದ ತಿಂಡಿಗಳ ಹೆಸರಿನ ನಾಮಫಲಕ, ಅಂಗಡಿಗಳ ನಾಮಫಲಕಗಳನ್ನು ಪಾಲಿಕೆ ಸಿಬ್ಬಂದಿ ವಶಕ್ಕೆ ತೆಗೆದುಕೊಂಡಿದ್ದರು. ಫುಟ್‌ಪಾತ್ ಮೇಲೆ ಬೈಕ್ ನಿಲ್ಲಿಸಿದ್ದ ಸವಾರರಿಗೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಿದ್ದರಿಂದ ಸಾರ್ವಜನಿಕರು ಕುತೂಹಲದಿಂದ ಕಾರ್ಯಾಚರಣೆ ವೀಕ್ಷಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.