ಧಾರವಾಡ

ಪಿಜಿ ಪರೀಕ್ಷಾ ವೇಳಾಪಟ್ಟಿ ಅವೈಜ್ಞಾನಿಕ

Published On :

ಧಾರವಾಡ : ಪ್ರಸಕ್ತ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿ ಅವೈಜ್ಞಾನಿಕ ಎಂದು ಆರೋಪಿಸಿ ಇಲ್ಲಿನ ಭಾರತ ವಿದ್ಯಾರ್ಥಿ ಫೆಡೆರೇಶನ್ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿ ಮೌಲ್ಯಮಾಪನ ಕುಲಸಚಿವರಿಗೆ ಮನವಿ ಸಲ್ಲಿಸಿತು.
ಪ್ರಸ್ತುತ ಪರಿಗಣಿಸಿದ ಸ್ನಾತಕೋತ್ತರ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಪರಿಗಣನೆಗೆ ತೆಗೆದುಕೊಂಡಿಲ್ಲ. ತರಾತುರಿಯಲ್ಲಿ ವಿವಿಯ ಆಡಳಿತ ಮಂಡಳಿ ಏಕಮುಖವಾಗಿ ವೇಳಾಪಟ್ಟಿಯನ್ನು ಸಿದ್ಧಗೊಳಿಸಿದೆ. ವಿವಿಯ ಈ ರೀತಿ ಅವೈಜ್ಞಾನಿಕ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಚೆಲ್ಲಾಟವಾಡುತ್ತಿದೆ. ಸದ್ಯ ಪ್ರಕಟಿಸಿರುವ ವೇಳಾಪಟ್ಟಿಯ ದಿನದಂದು ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಿವೆ. ಆ ಸ್ಪರ್ಧಾತ್ಮಕ ಪರೀಕ್ಷೆಗಳಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಾರೆ. ಆದ್ದರಿಂದ ಪ್ರಸ್ತುತ ಹೊರಡಿಸಿದ ವೇಳಾಪಟ್ಟಿಯನ್ನು ಕೂಡಲೇ ಕೈಬಿಡಬೇಕೆಂದು ಸಂಘಟನೆ ಒತ್ತಾಯಿಸಿತು. ಪ್ರತಿಭಟನೆಗೆ ಸ್ಪಂದಿಸಿದ ಕುಲಸಚಿವ ಜಿ.ಬಿ. ನಂದನ, ಈ ವಿಷಯ ಕುರಿತಾಗಿ ಕುಲಪತಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಪ್ರತಿಭಟನೆಯಲ್ಲಿ ಮಾರುತಿ ಅಂಬಿಗೇರ, ವಿಜಯಕುಮಾರ ಹೆಬಸೂರ, ಸಂದೀಪ ಕೋಳೂರಗಿ, ನಾಗರಾಜ ಹರಿಜನ, ಚಂದ್ರಶೇಖರ ಹೊಸಮನಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.