ಧಾರವಾಡ

ಗ್ರಾಪಂ ಸದಸ್ಯತ್ವ ರದ್ದತಿವಿಧೇಯಕ ಮಂಡನೆಗೆ ಮಡಿವಾಳಪ್ಪ ವಿರೋಧ

Published On :

ಧಾರವಾಡ: ಗ್ರಾಮಸಭೆಗೆ ಹಾಜರಾಗದ ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಸದಸ್ಯತ್ವ ರದ್ದತಿ ಕುರಿತು ವಿಧಾನಸಭೆಯಲ್ಲಿ ಮಂಡನೆಯಾದ ವಿಧೇಯಕವನ್ನು ರಾಜ್ಯ ಗ್ರಾಮ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಹಾಗೂ ಸದಸ್ಯರ ಒಕ್ಕೂಟ ವಿರೋಧಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಒಕ್ಕೂಟದ ರಾಜ್ಯಾಧ್ಯಕ್ಷ ಮಡಿವಾಳಪ್ಪ ದಿಂಡಲಕೊಪ್ಪ, ಗ್ರಾಮಸಭೆಗಳಾಗಲಿ ಅಥವಾ ಜನಸ್ಪಂದನ ಸಭೆಗಳಾಗಲಿ ಯಶಸ್ವಿಯಾಗದಿರುವುದಕ್ಕೆ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಅಥವಾ ಪಿಡಿಓಗಳು ಕಾರಣರಲ್ಲ. ಪ್ರಮುಖವಾಗಿ ಸರ್ಕಾರಿ ಇಲಾಖೆಗಳ ಅಧಿಕಾರಿಗಳು. ಒಟ್ಟು 21 ಇಲಾಖೆಗಳ ಅಧಿಕಾರಿಗಳು ಈ ಸಭೆಗೆ ಹಾಜರಾಗಬೇಕು. ಆದರೆ ಒಂದೆರಡು ಇಲಾಖೆಗಳ ಅಧಿಕಾರಿಗಳು ಮಾತ್ರ ಹೆಸರಿಗೆ ಸಭೆಗೆ ಹಾಜರಾಗುತ್ತಾರೆ. ಇದರಿಂದ ಗ್ರಾಪಂ ಸಮಸ್ಯೆಗಳು ಸಮಸ್ಯೆಗಳಾಗಿಯೇ ಉಳಿದುಕೊಳ್ಳುತ್ತಿವೆ. ಇಲ್ಲಿ ಸರ್ಕಾರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಬೇಕೆ ಹೊರತು ಉಳಿದವರಿಗಲ್ಲ. ಆದ್ದರಿಂದ ಗ್ರಾಮೀಣಾಭಿವೃದ್ಧಿ ಸಚಿವರು ಈ ವಿಧೇಯಕವನ್ನು ಮರು ಪರಿಶೀಲಿಸಬೇಕು. ಅಲ್ಲದೇ, ಎಲ್ಲ ಇಲಾಖೆಗಳ ಅಧಿಕಾರಿಗಳು ಎಲ್ಲ ಗ್ರಾಮ ಸಭೆಗಳಿಗೆ ಕಡ್ಡಾಯವಾಗಿ ಹಾಜರಾಗುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಮಡಿವಾಳಪ್ಪನವರು ಒತ್ತಾಯಿಸಿದ್ದಾರೆ. ಗ್ರಾಮ ಪಂಚಾಯ್ತಿ ಸಬಲೀಕರಣಕ್ಕೆ 1993ರ ತಿದ್ದುಪಡಿ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ಬರಬೇಕೆಂದು ಹಲವು ಬಾರಿ ಹೋರಾಟ ಮಾಡಿ ಹಿಂದಿನ ಸರ್ಕಾರಕ್ಕೆ ಮನವಿ ನೀಡಲಾಗಿದೆ. ಈ ಕುರಿತು ಸರ್ಕಾರ ತುಸು ಗಮನ ಹರಿಸಬೇಕಿದೆ ಎಂದೂ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.
ಇಂದು ಆಮ್ ಆದ್ಮಿ ಪಾರ್ಟಿ ಉದ್ಘಾಟನೆ
ಹುಬ್ಬಳ್ಳಿ: ಅರವಿಂದ ಕೇಜ್ರಿವಾಲ್ ಅವರ 'ಆಮ್ ಆದ್ಮಿ ಪಾರ್ಟಿ' ಮಹಾನಗರ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಸದಸ್ಯತ್ವ ಅಭಿಯಾನದ ಚಾಲನೆ ಜೂ. 15ರಂದು ನಡೆಯಲಿದೆ. ನಗರದ ಸ್ಟೇಶನ್ ರಸ್ತೆಯ ಪ್ರಕಾಶ ರೆಸ್ಟೋರೆಂಟ್‌ನಲ್ಲಿ ಅಂದು ಸಂಜೆ 5.30ಕ್ಕೆ ನಡೆಯಲಿರುವ ಉದ್ಘಾಟನೆ ಕಾರ್ಯಕ್ರಮ ಸಂದರ್ಭದಲ್ಲಿ ಕಾರ್ಯಕರ್ತರ ಹಾಗೂ ಸಾರ್ವಜನಿಕ ಸಭೆಯನ್ನೂ ಹಮ್ಮಿಕೊಳ್ಳಲಾಗಿದೆ. ಪಕ್ಷದ ರಾಜ್ಯಮಟ್ಟದ ಧುರೀಣರಾದ ವಿಜಯ ಶರ್ಮಾ, ಸಿದ್ಧಾರ್ಥ ಮತ್ತಿತರರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಸಂಚಾಲಕ ಶೈಲೇಂದ್ರಕುಮಾರ ಪಾಟೀಲ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.