ಬಾಲಕಾರ್ಮಿಕರ ವಿರೋಧಿ ದಿನ ಆಚರಣೆ
ಧಾರವಾಡ: ಜನತಾ ಶಿಕ್ಷಣ ಸಮಿತಿಯ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಬಾಲ ಕಾರ್ಮಿಕರ ವಿರೋಧಿ ದಿನ ಆಚರಿಸಲಾಯಿತು. ಶಾಲೆಯ 8ನೇ ವರ್ಗದ ಮಕ್ಕಳು ಬಾಲ ಕಾರ್ಮಿಕರ ವಿರೋಧಿ ದಿನವನ್ನು ಕುರಿತು ನಾಟಕ ಪ್ರಸ್ತುತ ಪಡಿಸಿದರು. 14 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಳ್ಳುವ ವಿವಿಧ ಸನ್ನಿವೇಶಗಳನ್ನು ಒಳಗೊಂಡ ನಾಟಕ ಯಶಸ್ವಿಯಾಗಿ ನಡೆಯಿತು. ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಕೇವಲ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಳ್ಳುವುದು ಹಾಗೂ ಅದರ ಬದಲಾಗಿ ಚಿಕ್ಕ ಮಕ್ಕಳನ್ನು ಶಾಲೆಗೆ ಕಳಿಸಿ ಅವರ ಭವಿಷ್ಯಕ್ಕೆ ಭದ್ರ ಬುನಾದಿಯನ್ನು ನಿರ್ಮಾಣ ಮಾಡಬೇಕೆಂಬ ಸಂದೇಶವನ್ನು ಈ ನಾಟಕ ಒಳಗೊಂಡಿತ್ತು. ಪ್ರಾಚಾರ್ಯರಾದ ಸಾಧನಾ ಎಸ್. ಮಾತನಾಡಿ, ಬಾಲ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳುವುದನ್ನು ಎಲ್ಲರು ವಿರೋಧಿಸಬೇಕೆಂದು ಹೇಳಿದರು. ಶಾಲೆಯ ಸಹ ಸಂಯೋಜಕಿ ಅನಿತಾ, ಸಾವಿತ್ರಿ ಹಾಗೂ ನಿರ್ಮಲಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

