ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನಿವೃತ್ತ ನೌಕರರಿಂದ ಅರೆಬೆತ್ತಲೆ ಪ್ರತಿಭಟನೆ
ಹುಬ್ಬಳ್ಳಿ: ವಾಯವ್ಯ ಸಾರಿಗೆ ಸಂಸ್ಥೆಯ ಎಲ್ಲ ನಿಗಮಗಳಲ್ಲಿ ನಿವೃತ್ತ ನೌಕರರಿಗೆ ಕೊಡಬೇಕಿರುವ ಬಾಕಿ ಹಣವನ್ನು ತಕ್ಷಣ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆಗಳ ನೌಕರರ ಮತ್ತು ನಿವೃತ್ತ ನೌಕರರ ಸಂಘಗಳ ಕ್ಷೇಮಾಭಿವೃದ್ಧಿ ಮಹಾಮಂಡಳದ ನೇತೃತ್ವದಲ್ಲಿ ನಿವೃತ್ತ ನೌಕರರು ಇಲ್ಲಿಯ ಗೋಕುಲ ರಸ್ತೆಯಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ನಿವೃತ್ತಿಯಾದ 30 ದಿನದೊಳಗೆ ನೀಡಬೇಕಿರುವ ಎಲ್ಲ ಮೊತ್ತವನ್ನು ವಿತರಿಸಬೇಕು. ತಡವಾದಲ್ಲಿ ಶೇ. 10ರಷ್ಟು ಬಡ್ಡಿ ದರ ಸೇರಿಸಿ ಹಣ ನೀಡಬೇಕು. 2003 ಹಾಗೂ 2010ರ ಜನೆವರಿ ಮತ್ತು ಜುಲೈನಲ್ಲಿ ನೀಡಬೇಕಿದ್ದ ತುಟ್ಟಿ ಭತ್ಯೆಯನ್ನು ತಕ್ಷಣ ನೀಡಬೇಕು. 2012ರಿಂದ ವೇತನ ಪರಿಷ್ಕರಣೆ ಬಾಕಿ ಹಣ ಒಂದೇ ಕಂತಿನಲ್ಲಿ ಬಿಡುಗಡೆಗೊಳಿಸಬೇಕು. ನಿವೃತ್ತ ನೌಕರರಿಗೆ ಕಚೇರಿಗಳಲ್ಲಿ ಪ್ರವೇಶಿಸಲು ಮುಕ್ತ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ನಂತರ ಬೇಡಿಕೆಗಳ ಈಡೇರಿಕೆಗಾಗಿ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಬೇಡಿಕೆಗಳ ಈಡೇರಿಕೆಗೆ ತಕ್ಷಣ ಕ್ರಮ ಕೈಗೊಳ್ಳದೆ ಇದ್ದಲ್ಲಿ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಮಹಾಮಂಡಳದ ಗೌರವಾಧ್ಯಕ್ಷ ರಾಜಶೇಖರ ಘೋರ್ಪಡೆ, ರೆ.ಪಿ. ಮಂದಾಲಿ, ಎ.ಆರ್. ಚವ್ಹಾಣ, ಎಚ್.ಜಿ. ಕೊಪ್ಪದ, ರಾಜು ಹಾಸನ, ವಿ.ವಿ. ಮತ್ತೂರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

