ಪ್ರತಿ ವಿಭಾಗದಲ್ಲೂ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ: ಖಾದರ್
ಧಾರವಾಡ: ಸರ್ಕಾರಿ ಆಸ್ಪತ್ರೆಗಳೂ ಉನ್ನತ ಸೌಲಭ್ಯಗಳನ್ನು ಹೊಂದಿ ಈ ಮೂಲಕ ರಾಜ್ಯದ ಜನತೆಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ದೃಷ್ಟಿಯಿಂದ ರಾಜ್ಯದ ಎಲ್ಲ ವಿಭಾಗಗಳಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳನ್ನು ತೆರೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಬುಧವಾರ ಇಲ್ಲಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಇದಲ್ಲದೇ, ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಅಗ್ಗದ ದರದಲ್ಲಿ ಔಷಧ ವಿತರಿಸುವ ಮಳಿಗೆಗಳನ್ನು ತೆರೆಯಲಾಗುವುದು. ಇದಕ್ಕೆ ಅಗತ್ಯವಿರುವ ಅನುದಾನವನ್ನು ಈ ಬಾರಿ ಬಜೆಟ್ನಲ್ಲಿ ಮೀಸಲಿರಿಸುವುದಾಗಿ ಹೇಳಿದರು. ವೈದ್ಯಕೀಯ ಸೇವೆ ಒದಗಿಸಲು ಸರ್ಕಾರ ಹಲವು ಯೋಜನೆಗಳನ್ನು ಹಾಕಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರತೆ ಇರುವ ವೈದ್ಯರ ಮತ್ತು ಇತರ ಸಲಕರಣೆಗಳ ಕೊರತೆ ನಿವಾರಿಸಲು ಅಗತ್ಯ ಅನುದಾನ ಸಹ ಒದಗಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

