ಧಾರವಾಡ

104 ಆರೋಗ್ಯವಾಣಿ ಕೇಂದ್ರಕ್ಕೆ ಚಾಲನೆ

Published On :

ಹುಬ್ಬಳ್ಳಿ: ಆರೋಗ್ಯ ಸೇವಾ ಮಾಹಿತಿಗಾಗಿ ಸ್ಥಾಪಿಸಿರುವ '104-ಆರೋಗ್ಯವಾಣಿ'ಯಿಂದ ಸಮಾಜದ ಕಟ್ಟಕಡೆಯ ಜನರಿಗೂ ಆರೋಗ್ಯ ಸೇವೆ ಒದಗಿಸಲು ಸಾಧ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ಹೆಲ್ತ್ ಮ್ಯಾನೇಜಮೆಂಟ್ ಆ್ಯಂಡ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಸಹಯೋಗದೊಂದಿಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹುಬ್ಬಳ್ಳಿಯಲ್ಲಿ ಸ್ಥಾಪಿಸಿರುವ '104-ಆರೋಗ್ಯವಾಣಿ' ಕಾಲ್‌ಸೆಂಟರ್‌ನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.  ಸಾರ್ವಜನಿಕರು ತಮಗಿರುವ ರೋಗದ ಲಕ್ಷಣಗಳ ಮಾಹಿತಿಯನ್ನು ಆರೋಗ್ಯವಾಣಿ ಮೂಲಕ ನೀಡಿದಲ್ಲಿ ಪ್ರಾರಂಭದ ಹಂತದಲ್ಲಿಯೇ ರೋಗ ಪತ್ತೆ ಮಾಡಿ, ಗುಣಪಡಿಸಬಹುದು. ಕೊನೆಗಳಿಗೆಯಲ್ಲಿ ರೋಗ ಪತ್ತೆಯಾಗಿ ಭೀಕರ ಹಂತಕ್ಕೆ ತಲುಪುವುದು ಇದರಿಂದ ತಪ್ಪುತ್ತದೆ ಎಂದರು. ಪ್ರತಿ ಜಿಲ್ಲೆಯಲ್ಲಿ ಹೆಚ್ಚಾಗಿರುವ ರೋಗಗಳ ಮಾಹಿತಿ ಪಡೆದುಕೊಂಡು, ರೋಗಗಳ ನಿವಾರಣೆಗೆ ಆರೋಗ್ಯವಾಣಿ ಸಹಾಯಕರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಸಮರ್ಪಕ ಸೇವೆ ಲಭ್ಯವಾಗದಿದ್ದರೆ ಅಥವಾ ರೋಗಿಗಳನ್ನು ತಪಾಸಣೆ ಮಾಡುವ ಉಪಕರಣಗಳು ಕೆಟ್ಟಿದ್ದರೆ ರೋಗಿಗಳು ಈ ಕರೆ ಮೂಲಕ ದೂರು ಸಲ್ಲಿಸಬಹುದು ಎಂದು ತಿಳಿಸಿದರು. ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ವಾರ್ತಾ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾತನಾಡಿದರು.

ಪ್ರತಿ ವಿಭಾಗದಲ್ಲೂ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ: ಸರ್ಕಾರಿ ಆಸ್ಪತ್ರೆಗಳೂ ಉನ್ನತ ಸೌಲಭ್ಯಗಳನ್ನು ಹೊಂದಿ ಈ ಮೂಲಕ ರಾಜ್ಯದ ಜನತೆಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ದೃಷ್ಟಿಯಿಂದ ರಾಜ್ಯದ ಎಲ್ಲ ವಿಭಾಗಗಳಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳನ್ನು ತೆರೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ಧಾರವಾಡದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.