ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ
ಧಾರವಾಡ: ನಗರದ ಸುಭಾಸ ರಸ್ತೆ, ಜ್ಯುಬಲಿ ಸರ್ಕಲ್ ಹಾಗೂ ಗಾಂಧಿಚೌಕ ರಸ್ತೆಗಳನ್ನು ಕಾಂಕ್ರೀಟ್ ಮಾಡಬೇಕು ಮತ್ತು ಸೂಪರ್ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ಮಹಾನಗರ ಸಮಗ್ರ ಅಭಿವೃದ್ಧಿ ಸಂಘ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಜನಸಾಮಾನ್ಯರು ನಿತ್ಯ ವ್ಯಾಪಾರ ವಹಿವಾಟು ನಡೆಸುವ ಸುಭಾಸ ರಸ್ತೆ ಹಾಗೂ ಸೂಪರ್ ಮಾರುಕಟ್ಟೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಅಪಘಾತಕ್ಕೆ ಎಡೆಮಾಡಿಕೊಡುವಂತಿವೆ. ಆದರೆ, ಈ ಬಗ್ಗೆ ಮಹಾನಗರ ಪಾಲಿಕೆ ನಿರ್ಲಕ್ಷ ವಹಿಸಿದೆ. ಅದರಲ್ಲೂ ಮಳೆಗಾಲದಲ್ಲಿ ಈ ತಗ್ಗು- ಗುಂಡಿಗಳಲ್ಲಿ ಮಳೆ ನೀರು ನಿಲ್ಲುತ್ತದೆ. ಈ ನೀರಿನಲ್ಲಿ ಹುಟ್ಟಿಕೊಳ್ಳುವ ಸೊಳ್ಳೆಗಳಿಂದ ಮಾರಕ ಡೆಂಘೀ ಮತ್ತು ಅನೇಕ ರೋಗಳಿಗೆ ಸಾರ್ವಜನಿಕರು ತುತ್ತಾಗುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಹಾಗೂ ಸೂಪರ್ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿಠ್ಠಲ ಕಮ್ಮಾರ, ಎಸ್.ಎಸ್. ಹಿರೇಮಠ, ಎನ್.ಎಂ. ಪತ್ತಾರ, ಜಿ.ಎಸ್. ಬ್ಯಾಡಗಿ, ಪ್ರಕಾಶ ಉಡಿಕೇರಿ, ಕೆ.ವಿ. ರಾಯಚೂರು, ಲಿಂಗರಾಜ ಅಂಗಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

