ಆಶ್ರಯ ಮನೆ ಮಾರಾಟ ಅಕ್ರಮ: ಡಿಸಿ
'ಕನ್ನಡಪ್ರಭ'ದ ಆಶ್ರಯ ಅಕ್ರಮ ಸರಣಿಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಸಮೀರ ಶುಕ್ಲ ಅವರು, ವಿವಿಧ ಯೋಜನೆಗಳಡಿ ಬಡವರಿಗೆ ಸರ್ಕಾರ ಸೂರು ನೀಡುವ ಕೆಲಸ ಮಾಡುತ್ತಿದ್ದು, ಸರ್ಕಾರದಿಂದ ಪಡೆದಿರುವ ಇಂತಹ ಮನೆಗಳ ಮಾರಾಟಕ್ಕೆ ಅವಕಾಶವಿಲ್ಲ ಎಂದಿದ್ದಾರೆ. ಒಂದು ವೇಳೆ ರಾಮನಗರ, ವಾಜಪೇಯಿ ನಗರ ಮತ್ತು ಜಗದೀಶ ನಗರಗಳ ಆಶ್ರಯ ಮನೆಗಳನ್ನು ಫಲಾನುಭವಿಗಳು ನಿಯಮ ಉಲ್ಲಂಘಿಸಿ ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸರ್ಕಾರ ನೀಡುವ ಜಮೀನು, ಮನೆಗಳ ಪರಭಾರೆಗೆ ಸಂಬಂಧಿಸಿದಂತೆ ಜಾರಿಯಲ್ಲಿರುವ ನಿಯಮಾವಳಿಗಳಂತೆ ಈ ಯೋಜನೆಗೂ ಕೆಲವು ನಿಯಮಾವಳಿಗಳನ್ನು ಸರ್ಕಾರ ರೂಪಿಸಿದೆ. ಯಾವುದಕ್ಕೂ ಆಶ್ರಯ ಮನೆಗಳ ಮಾರಾಟ ನಡೆಯುತ್ತಿದ್ದರೆ ಪರಿಶೀಲನೆ ಮಾಡುತ್ತೇನೆ. ಒಂದು ವೇಳೆ ಈಗಾಗಲೇ ಮಾರಾಟ ಪ್ರಕ್ರಿಯೆ ನಡೆದಿದ್ದರೆ ಅಂತಹ ಮನೆಗಳನ್ನು ಜಿಲ್ಲಾಡಳಿತ ತನ್ನ ವಶಕ್ಕೆ ತೆಗೆದುಕೊಂಡು ಫಲಾನುಭವಿ ಮತ್ತು ಖರೀದಿದಾರರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

