ಧಾರವಾಡ

ಸಚಿವ ಸೊರಕೆಗೆ ಸನ್ಮಾನ

Published On :

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎ.ಎಂ. ಹಿಂಡಸಗೇರಿ ಅಧ್ಯಕ್ಷತೆಯಲ್ಲಿ ನಗರಾಭಿವೃದ್ಧಿ ಸಚಿವ ವಿನಯಕುಮಾರ ಸೊರಕೆ ಅವರನ್ನು ಸನ್ಮಾನಿಸಲಾಯಿತು.  ಸನ್ಮಾನ ಸ್ವೀಕರಿಸಿದ ಮಾತನಾಡಿದ ಸಚಿವರು, ಬೆಂಗಳೂರು ಮಾದರಿಯಲ್ಲಿ ರಾಜ್ಯದ ಎಲ್ಲ ಪಟ್ಟಣಗಳನ್ನು ಸಮಾನಾಂತರವಾಗಿ ಅಭಿವೃದ್ಧಿಗೊಳಿಸಲಾಗುವುದು. ಈ ಕುರಿತಾಗಿ ಸ್ಥಳೀಯ ಶಾಸಕರು, ವಿಧಾನಪರಿಷತ್ ಸದಸ್ಯರು, ಪಾಲಿಕೆ ಸದಸ್ಯರು, ಬುದ್ಧಿ ಜೀವಿಗಳು, ಹೋರಾಟಗಾರರ ಸಲಹೆ ಸೂಚನೆ ಪಡೆದು ಅಭಿವೃದ್ಧಿ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುವುದು. ಬಡವರಿಗೆ ಹುಡಾ ವತಿಯಿಂದ ಕಡಿಮೆ ದರದಲ್ಲಿ ಬಡಾವಣೆಗಳನ್ನು ನಿರ್ಮಿಸಿ ವಿತರಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದರು. ವಿಧಾನಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ, ಹು-ಧಾ ಜಿಲ್ಲಾಧ್ಯಕ್ಷ ಎ.ಎಂ. ಹಿಂಡಸಗೇರಿ, ಶಾಸಕ ವಿನಯ ಕುಲಕರ್ಣಿ, ಕಾಂಗ್ರೆಸ್ ನಾಯಕರಾದ ಎಫ್.ಎಚ್. ಜಕ್ಕಪ್ಪನವರ, ಸದಾನಂದ ಡಂಗನವರ, ಪ್ರಕಾಶ ಘಾಟಗೆ, ಮರಿಗೌಡ ಪಾಟೀಲ, ಬುರಾನ್‌ಗವಳಿ, ಡಾ. ಮಹೇಶ ನಾಲವಾಡ, ಮುಲ್ಲಾ ಮಿಶ್ರಿಕೋಟಿ, ಆನಂದ ಜಾಧವ, ಪಾರೀಶ ಪತ್ರಾವಳಿ, ಶ್ರೀಧರ ಶೇಠ, ಆನಂದ ಆದವಾನಿ, ಆನಂದ ಮುಶಣ್ಣವರ ಇತರರು ಇದ್ದರು.
ಪ್ರತಿಭಟನಾ ರ್ಯಾಲಿ
ಹುಬ್ಬಳ್ಳಿ: ಖಾಸಗಿ ಬಸ್‌ಗಳನ್ನು ತಡೆ ಹಿಡಿದು ಕೇಸ್ ದಾಖಲಿಸಿ ಖಾಸಗಿ ಬಸ್ ಮಾಲೀಕರ ಮತ್ತು ನೌಕರರಿಗೆ ಅನ್ಯಾಯ ಎಸಗುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕನ್ನಡ ಕ್ರಾಂತಿದೀಪ ಸಂಘಟನೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನಾ ರ್ಯಾಲಿ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.  ಸುಮಾರು 15ಕ್ಕೂ ಹೆಚ್ಚು ವರ್ಷಗಳಿಂದ ಖಾಸಗಿ ಬಸ್‌ಗಳು ವಿವಿಧ ನಗರಗಳಿಗೆ ಸಂಚರಿಸುತ್ತಿದ್ದು, ಈ ಖಾಸಗಿ ಬಸ್‌ಗಳಲ್ಲಿ ಚಾಲಕ ನಿರ್ವಾಹಕ ಎಂದು ನೂರಾರು ಬಡವರು ಕೆಲಸ ಮಾಡುತ್ತಿದ್ದಾರೆ. ಖಾಸಗಿ ಬಸ್‌ಗಳ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅನೇಕ ಜನರು ತಮ್ಮ ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ. ಖಾಸಗಿ ಬಸ್ ಸಂಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶವನ್ನು ಅಧಿಕಾರಿಗಳು ದುರುಪಯೋಗಪಡಿಸಿಕೊಂಡು ಖಾಸಗಿ ಬಸ್‌ಗಳ ಮಾಲೀಕರಿಗೆ ತೊಂದರೆ ನೀಡುತ್ತಿದ್ದಾರೆ. ಆದ್ದರಿಂದ ತಕ್ಷಣ ಖಾಸಗಿ ಬಸ್‌ಗಳ ಸಂಚಾರಕ್ಕೆ ಸಂಬಂಧಿಸಿದಂತೆ ಜಾರಿಯಲ್ಲಿರುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಇಲ್ಲದಿದ್ದರೆ ಖಾಸಗಿ ಬಸ್ ನೌಕರರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಕನ್ನಡ ಕ್ರಾಂತಿ ದೀಪ ಸಂಘಟನೆ ಅಧ್ಯಕ್ಷ ರವಿ ಕದಂ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸರ್ಕಾರದ ಆದೇಶದ ವಿರುದ್ಧ ಚನ್ನಮ್ಮ ವೃತ್ತದ ಬಳಿ ಘೋಷಣೆ ಕೂಗಿ ನಂತರ ತಹಸೀಲ್ದಾರ್‌ಗೆ ಮನವಿ ನೀಡಿದರು.
---

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.