70 ಸಾವಿರ ದೇಣಿಗೆ ಸಂಗ್ರಹ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜೂ. 25
ಉತ್ತರಾಖಂಡದ ಸಂತ್ರಸ್ತರಿಗೆ ಹುಬ್ಬಳ್ಳಿ ನಗರದಲ್ಲಿ ಮಂಗಳವಾರ ಮಹಾನಗರ ಬಿಜೆಪಿ ಜಿಲ್ಲಾ ಘಟಕ ರು. 70,500 ಸಂಗ್ರಹಿಸಿದೆ. ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ದುರ್ಗದ ಬೈಲ್ ಸೇರಿದಂತೆ ವಿವಿಧ ಮಾರುಕಟ್ಟೆ ಪ್ರದೇಶಗಳಲ್ಲಿ ವ್ಯಾಪಾರಿ ಮತ್ತು ಸಾರ್ವಜನಿಕರಿಂದ ಬಿಜೆಪಿ ಕಾರ್ಯಕರ್ತರು ದೇಣಿಗೆ ಸಂಗ್ರಹಿಸಿದರು.
ದುರ್ಗದ ಬೈಲ್ನಲ್ಲಿ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರಹ್ಲಾದ ಜೋಶಿ, ಉತ್ತರಾಖಂಡದಲ್ಲಿ ಸುರಿದ ಭೀಕರ ಮಳೆಯಿಂದಾದ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಬಿಜೆಪಿ ದೇಣಿಗೆ ಸಂಗ್ರಹ ಅಭಿಯಾನ ಕೈಗೆತ್ತಿಕೊಂಡಿದ್ದು, ಸಾರ್ವಜನಿಕರಿಂದ ವತ್ತು ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿ ಉತ್ತರಾಖಂಡ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಹೇಳಿದರು.
ಉತ್ತರಾಖಂಡದ ಸಂತ್ರಸ್ತರಿಗೆ ಸಾರ್ವಜನಿಕರಿಂದ ಹಣ ಸಂಗ್ರಹಿಸುವುದರ ಜೊತೆಗೆ ಪಕ್ಷದ ಕಾರ್ಯಕರ್ತರು ದೇಣಿಗೆ ನೀಡಲಿದ್ದಾರೆ. ವೈಯಕ್ತಿಕವಾಗಿ ನಾನು ನನ್ನ ಒಂದು ತಿಂಗಳ ವೇತನವನ್ನು ಉತ್ತರಾಖಂಡದ ಸಂತ್ರಸ್ತರಿಗೆ ನೀಡಿದ್ದೇನೆ. ಅದೇ ರೀತಿ ಬಿಜೆಪಿ ಶಾಸಕರಿಗೂ ಸಂತ್ರಸ್ತರಿಗೆ ಆರ್ಥಿಕವಾಗಿ ನೆರವಾಗುವಂತೆ ಕೇಳಿಕೊಳ್ಳುತ್ತೇನೆ. ಈ ನಿಟ್ಟಿನಲ್ಲಿ ಶೀಘ್ರ ಪಕ್ಷದ ಶಾಸಕರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಇದೇ ಸಮಯದಲ್ಲಿ ಎನ್ಜಿಇಎಫ್ ಮಾಜಿ ಅಧ್ಯಕ್ಷ ರಂಗಾ ಬದ್ದಿ ರು. 5 ಸಾವಿರ ದೇಣಿಗೆಯಾಗಿ ನೀಡಿದ್ದಾರೆ.
ದೇಣಿಗೆ ಸಂಗ್ರಹ ಅಭಿಯಾನದಲ್ಲಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಮಹೇಶ ಟೆಂಗಿನಕಾಯಿ, ನಾಗೇಶ ಕಲ್ಬುರ್ಗಿ, ರಂಗಾಬದ್ದಿ, ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಹುಬ್ಬಳ್ಳಿ ನಗರದ ದುರ್ಗದ ಬೈಲ್ ಸೇರಿದಂತೆ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ಉತ್ತರಾಖಂಡ ಸಂತ್ರಸ್ತರ ದೇಣಿಗೆ ಸಂಗ್ರಹ ಅಭಿಯಾನ ಜರುಗಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

