ಧಾರವಾಡ

ವಿಜನ್ ಕೋಟಾ ಕೇಂದ್ರದ ವಿದ್ಯಾರ್ಥಿಗಳು ಐಐಟಿಗೆ ರ್ಯಾಂಕ್

Published On :

ಧಾರವಾಡ: ಐಐಟಿ ಪ್ರವೇಶ ಪರೀಕ್ಷೆಯಲ್ಲಿ ಇಲ್ಲಿನ ವಿಜನ್ ಕೋಟಾ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ಮೂವರು ವಿದ್ಯಾರ್ಥಿಗಳು ಅತ್ಯುತ್ತಮ ರ್ಯಾಂಕ್ ಪಡೆದಿದ್ದಾರೆ ಎಂದು ಕೇಂದ್ರದ ನಿರ್ದೇಶಕ ಎನ್.ವಿ. ದೇಸಾಯಿ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ ಅವರು, ಕೇಂದ್ರದಲ್ಲಿ ತರಬೇತಿ ಪಡೆದ ಸೌರಭ ಯಾದವ 706ನೇ ರ್ಯಾಂಕ್, ವಿಜಯ ವೈ. 920ನೇ ರ್ಯಾಂಕ್ ಮತ್ತು ಶ್ರೀಶ ಎಸ್. 1065ನೇ ರ್ಯಾಂಕ್ ಪಡೆದು ರಾಷ್ಟ್ರದ ಐದು ಅತ್ಯುತ್ತಮ ಸಂಸ್ಥೆಗಳಲ್ಲಿ ಸ್ಥಾನ ಪಡೆದಿದ್ದಾರೆ. ಅಲ್ಲದೇ, 14 ವಿದ್ಯಾರ್ಥಿಗಳು ಎನ್‌ಐಟಿಕೆಗೆ ಆಯ್ಕೆಯಾಗಿದ್ದು, ಒಂಭತ್ತು ವಿದ್ಯಾರ್ಥಿಗಳು ಸೂರತ್ಕಲ್ ಎಂಜಿನಿಯರಿಂಗ್ ಕಾಲೇಜಿಗೆ ಪ್ರವೇಶ ಪಡೆಯುವ ಅರ್ಹತೆ ಪಡೆದುಕೊಂಡಿದ್ದಾರೆ. 4 ವರ್ಷಗಳಿಂದ ಐಐಟಿ ಮತ್ತು ಪ್ರತಿಷ್ಠಿತ ಸಂಸ್ಥೆಗಳಿಂದ ತರಬೇತಿ ಹೊಂದಿದ ನುರಿತ ಬೋಧಕರಿಂದ ಕೇಂದ್ರದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು.
ಪ್ರಸ್ತುತ ಸಂಸ್ಥೆ ಪಿಯುಸಿ ಪ್ರಥಮ, ದ್ವಿತೀಯ ವರ್ಷ, ಐಐಟಿ ಮತ್ತು ಎನ್‌ಇಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿದ್ದು, ಮಾಹಿತಿಗಾಗಿ 94490 69022 ಸಂಪರ್ಕಿಸಿ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.