ಮಾರುಕಟ್ಟೆಗೆ ಪುಸ್ತಕ ಬಿಡುಗಡೆ ಮಾಡಿ
ಹುಬ್ಬಳ್ಳಿ: ಪ್ರಥಮ ಪಿಯುಸಿ ಹಿಂದಿ ಮತ್ತು ಗಣಿತಶಾಸ್ತ್ರ ಪುಸ್ತಕಗಳನ್ನು ತಕ್ಷಣ ಮಾರುಕಟ್ಟೆ ಬಿಡುಗಡೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಿದರು. ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳಾಗಿದ್ದು ಇನ್ನೂವರೆಗೂ ಸರ್ಕಾರ ಪ್ರಥಮ ಪಿಯುಸಿಯ ಹಿಂದಿ ಮತ್ತು ಗಣಿತಶಾಸ್ತ್ರ ಪುಸ್ತಕಗಳು ಮಾರುಕಟ್ಟೆಯಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಾಗುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು ತಕ್ಷಣ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ವಿನಾಕಾರಣ ತೆಗೆದು ಹಾಕಲಾಗಿದೆ: ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆಯಲ್ಲಿ ಸರ್ಕಾರ ತಲೆ ತೂರುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕವಾಗಿರುವ ಸಿಂಡಿಕೇಟ್ ಸದಸ್ಯರನ್ನು ವಿನಾಕಾರಣ ತೆಗೆದು ಹಾಕಲಾಗಿದೆ. ಸಿಂಡಿಕೇಟ್ ಸದಸ್ಯರನ್ನು ವಜಾ ಮಾಡಬಾರದು, ವಿಶ್ವವಿದ್ಯಾಲಯದ ಆಡಳಿತದಲ್ಲಿ ಸರ್ಕಾರ ತಲೆ ಹಾಕಬಾರದು ಎಂದು ಆಗ್ರಹಿಸಿದರು. ಸರ್ಕಾರಿ ಪಿಯು ಮತ್ತು ಪದವಿ ಮಹಾವಿದ್ಯಾಲಯಗಳಲ್ಲಿ ಖಾಲಿ ಇರುವ ಉಪನ್ಯಾಸಕರನ್ನು ಆದಷ್ಟು ಬೇಗ ಭರ್ತಿ ಮಾಡಿ, ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ಇಲ್ಲಿನ ಮಹಿಳಾ ವಿದ್ಯಾಪೀಠದಿಂದ ಆರಂಭವಾದ ವಿದ್ಯಾರ್ಥಿಗಳ ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಸಾಗಿ ನಂತರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

