ಧಾರವಾಡ

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭೇಟಿ

Published On :

ಕುಂದಗೋಳ: ತಾಲೂಕಿನ ಯಲಿವಾಳ ಗ್ರಾಮಕ್ಕೆ ಬುಧವಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಂಗಡಿ ಅವರು ಭೇಟಿ ನೀಡಿ ಪರಿಶೀಲಿಸಿ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಗರ್ಭಿಣಿಯರು ಮತ್ತು ಕಿಶೋರಿಯರಿಗೆ ವಿತರಿಸಿದ ಪೌಷ್ಟಿಕ ಆಹಾರದಲ್ಲಿ ನಡೆದ ಭ್ರಷ್ಟಾಚಾರದ ಕುರಿತು 'ಕನ್ನಡಪ್ರಭ'ದಲ್ಲಿ ವಿಶೇಷ ವರದಿಯಾದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರು, ಗ್ರಾಮಸ್ಥರೊಂದಿಗೆ ಸಮಾಲೋಚಿಸಿ, ಇನ್ನು ಮುಂದೆ ಇಂಥ ಘಟನೆಗಳು ನಡೆಯದಂತೆ ಜಾಗೃತಿ ವಹಿಸುವುದಾಗಿ ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಅಪ್ಪಣ್ಣ ಹಿರೇಗೌಡ್ರ ಮಾತನಾಡಿ, ಇದು ಕಾಟಾಚಾರದ ಭೇಟಿ ಆಗದೇ, ಇನ್ನು ಮುಂದೆ ಈ ರೀತಿ ಆಗದಂತೆ ಗಮನಹರಿಸಿ. ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಂಗಡಿ ಅವರಿಗೆ ಎಚ್ಚರಿಸಿದರು. ಅಂಗನವಾಡಿಯಲ್ಲಿನ ಮಕ್ಕಳ ಸಂಖ್ಯೆ 22 ಇದ್ದರೂ 35 ಎಂದು ಮಕ್ಕಳ ಹಾಜರಾತಿ ಇದ್ದದ್ದನ್ನು ಅಧ್ಯಕ್ಷರು ಗಮನಕ್ಕೆ ತಂದಾಗ ಇಂಥ ಕೇಂದ್ರಗಳನ್ನು ಪರಿಶೀಲಿಸಿ, ರದ್ದುಗೊಳಿಸುವುದಾಗಿ ಅಂಗಡಿ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.