ಧಾರವಾಡ

ಸಂಘದ ಅವ್ಯವಹಾರ ಪ್ರಕರಣಕ್ಕೆ ಮತ್ತೆ ಜೀವ

Published On :

ಧಾರವಾಡ:  ಪೊಲೀಸ್ ಸಹಕಾರಿ ಸಂಘದಲ್ಲಿ ರು. ಲಕ್ಷಾಂತರ ಅವ್ಯವಹಾರ ನಡೆದ ಪ್ರಕರಣ ಇದೀಗ ಮತ್ತೆ ಜೀವ ಪಡೆದುಕೊಂಡಿದೆ. ಇಲ್ಲಿನ ಜಿಲ್ಲಾ ಪೊಲೀಸ್ ನೌಕರರ ವಿವಿಧೋದ್ದೇಶಗಳ ಸಹಕಾರ ಸಂಘದಲ್ಲಿ 2004-05ನೇ ಸಾಲಿನಲ್ಲಿ ಸಂಘದ ಕಾರ್ಯದರ್ಶಿ ಸತೀಶ ಜಾಧವ ನಡೆಸಿದ ರು. 2.42 ಲಕ್ಷ ಅವ್ಯವಹಾರ ಲೆಕ್ಕ ಪರಿಶೋಧನೆಯಲ್ಲಿ ಪತ್ತೆಯಾಗಿತ್ತು. ಲೆಕ್ಕ ಪರಿಶೋಧಕರು ತಮ್ಮ ವರದಿಯಲ್ಲಿ ತಿಳಿಸಿದ ಹಿನ್ನೆಲೆಯಲ್ಲಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರು ಇದೀಗ ಪೊಲೀಸರಿಗೆ ದೂರು ನೀಡಿದ್ದಾರೆ. ಸಂಘದ ಕಾರ್ಯದರ್ಶಿ ಸತೀಶ ಜಾಧವ ವಿರುದ್ಧ ಉಪನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ಸಲ್ಲಿಸಲಾಗಿದೆ. ಪ್ರಕರಣಕ್ಕೆ ಸಂಬಧಿಸಿದಂತೆ ಆರೋಪಿಯನ್ನು ಇನ್ನೂ ಬಂಧಿಸಿಲ್ಲ ಎಂದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಿಳಿಸಿದ್ದಾರೆ.
ಕಳ್ಳತನ: ಓರ್ವನ ಬಂಧನ
ಧಾರವಾಡ:  ಇಲ್ಲಿನ ವಿದ್ಯಾಗಿರಿ ಪೊಲೀಸ್ ಠಾಣೆಯ ಪೊಲೀಸರು ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಶನಿವಾರ ಬಂಧಿಸಿದ್ದಾರೆ. ಇಲ್ಲಿನ ನಂದೇಶ್ವರ ನಗರ ನಿವಾಸಿ ಗೋಪಾಲ ನಾಗಪ್ಪ ಬಂಡಿವಡ್ಡರ ಬಂಧಿತ ಆರೋಪಿಯಾಗಿದ್ದಾನೆ. ಈತನು ಶುಕ್ರವಾರ ಹುಬ್ಬಳ್ಳಿಯಿಂದ ಬೇಂದ್ರೆ ನಗರ ಸಾರಿಗೆ ಬಸ್ಸಿನಲ್ಲಿ ಧಾರವಾಡಕ್ಕೆ ಬರುತ್ತಿದ್ದ ಕರಮಡಿ ಗ್ರಾಮದ ಮಲ್ಲನಗೌಡ ಕಲ್ಲನಗೌಡ ಮಾಲಿ ಪಾಟೀಲ ಎಂಬುವರು ರು. 12 ಸಾವಿರ ಎನ್ಟಿಟಿಫ್ ಬಳಿ ಅಪಹರಿಸಿ ಪರಾರಿಯಾಗಿದ್ದ. ಈ ಕುರಿತು ಮಲ್ಲನಗೌಡ ಮಾಲಿಪಾಟೀಲ ವಿದ್ಯಾಗಿರಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಪೊಲೀಸ್ ಇನ್ಸಪೆಕ್ಟರ್ ಗುರು ಮತ್ತೂರ ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.