ಧಾರವಾಡ

ಸಂತ್ರಸ್ತರ ನಿಧಿ ಸಂಗ್ರಹಕ್ಕಾಗಿ 3ರಿಂದ ಕಲಾಕೃತಿ ಪ್ರದರ್ಶನ

Published On :

ಕ.ಪ್ರ.ವಾರ್ತೆ ,  ಧಾರವಾಡ  ,  ಜೂ. 30
ಉತ್ತರಾಖಂಡದಲ್ಲಿ ಉಂಟಾದ ಪ್ರವಾಹದಿಂದ ಸಾವಿರಾರು ಕುಟುಂಬಗಳು ನಿರಾಶ್ರಿತರಾಗಿದ್ದು ಅವರಿಗೆ ಸಾಧ್ಯವಾದಷ್ಟು ಆರ್ಥಿಕ ಸಹಾಯ ನೀಡುವ ದೃಷ್ಟಿಯಿಂದ ಧಾರವಾಡದ ಕಲಾಮಂಡಳ ಜು.3ರಿಂದ ವಿಶೇಷ ಕಲಾ ಪ್ರದರ್ಶನ ಹಮ್ಮಿಕೊಂಡಿದೆ.  
ಈ ಕುರಿತು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಲಾಮಂಡಳ ಸಂಸ್ಥೆಯ ಕಾರ್ಯದರ್ಶಿ ಮಧು ದೇಸಾಯಿ, ಅತಂತ್ರ ಸ್ಥಿತಿಯಲ್ಲಿರುವ ಅಲ್ಲಿನ ಜನರಿಗೆ ಮಾನವೀಯ ದೃಷ್ಟಿಯಿಂದ ಸಹಕಾರ ನೀಡುವುದು ಎಲ್ಲರ ಕರ್ತವ್ಯ.
ಈ ನಿಟ್ಟಿನಲ್ಲಿ ಸಂಸ್ಥೆಯು ಜು.3ರಿಂದ 7ರವರೆಗೆ ರಾಜ್ಯ ಹಾಗೂ ಹೊರ ರಾಜ್ಯಗಳ 50 ಕಲಾವಿದರ ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟ ಏರ್ಪಡಿಸಲಾಗಿದೆ. ಮಾರಾಟದಿಂದ ಬಂದ ಹಣವನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಸಮರ್ಪಿಸಲಾಗುವುದು. ಈ ಕಾರ್ಯಕ್ಕೆ ಕುರ್ತಕೋಟಿ ಮೆಮೋರಿಯಲ್ ಟ್ರಸ್ಟ್, ಧಾರವಾಡದ ಲೈಯನ್ಸ್ ಕ್ಲಬ್ ಹಾಗೂ ಪ್ರದರ್ಶನ ನಡೆಯುವ ಮಯೂರ ಆದಿತ್ಯಾ ರೆಸಾರ್ಟ್ ಸಹಕಾರ ನೀಡಿವೆ ಎಂದರು.
ಪ್ರಖ್ಯಾತ ಕಲಾವಿದರ ಕೃತಿಗಳು: ರಾಷ್ಟ್ರದ ಪ್ರಖ್ಯಾತ ಕಲಾವಿದರಾದ ಗುಲ್ಬರ್ಗದ ವಿ.ಜಿ. ಅಂದಾನಿ, ಪುಣೆಯ ರಾಮಚಂದ್ರ ಕರಟಮಲ್, ಸತಾರಾದ ವಿಜಯಕುಮಾರ ದುಮ್ಮಲ ಸೇರಿದಂತೆ ಮೈಸೂರು, ಬೆಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡದ ಅನೇಕ ಕಲಾವಿದರು ಈಗಾಗಲೇ ತಮ್ಮ ಕಲಾಕೃತಿಗಳನ್ನು ಕಳುಹಿಸಿಕೊಟ್ಟಿದ್ದಾರೆ.
ಜು.3ರಂದು ಸಂಜೆ 5.30ಕ್ಕೆ ಮಯೂರ ರೆಸಾರ್ಟ್‌ನಲ್ಲಿ ಜಿಲ್ಲಾಧಿಕಾರಿ ಸಮೀರ ಶುಕ್ಲಾ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ವಿನಯ ಕುಲಕರ್ಣಿ ಹಾಗೂ ಅರವಿಂದ ಬೆಲ್ಲದ ಭಾಗವಹಿಸುತ್ತಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.