ಧಾರವಾಡ

ಸಮಸ್ಯೆಗಳಿಗೆ ಪ್ರಾದೇಶಿಕ ಪಕ್ಷಗಳೇ ಪರಿಹಾರ

Published On :

ಧಾರವಾಡ: ಜನರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ. ಜನರ ಸಮಸ್ಯೆಗಳು ಪರಿಹಾರವಾಗಬೇಕಾದರೆ ಪ್ರಾದೇಶಿಕ ಪಕ್ಷದಿಂದ ಮಾತ್ರ ಸಾಧ್ಯ ಎಂದು ಬಿಎಸ್ಸಾರ್ ಕಾಂಗ್ರೆಸ್ ಅಧ್ಯಕ್ಷ ಬಿ.ಶ್ರೀರಾಮುಲು ಇಲ್ಲಿ ಹೇಳಿದರು. ಇಲ್ಲಿನ ಕಡಪಾ ಮೈದಾನದಲ್ಲಿ ಶುಕ್ರವಾರ ನಡೆದ ಪ್ರಚಾರಾರ್ಥ ಸಭೆಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಮಸ್ಯೆ ಹಾಗೂ ಕುಂದಕೊರತೆಗಳ ಕೂಗು ರಾಷ್ಟ್ರೀಯ ಪಕ್ಷದ ನಾಯಕರಿಗೆ ಕೇಳುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಬಿಎಸ್ಸಾರ್ ಕಾಂಗ್ರೆಸ್ ಸ್ಥಾಪನೆಗೊಂಡಿದೆ. ರಾಷ್ಟ್ರೀಯ ಪಕ್ಷದ ನಾಯಕರಿಗೆ ಅಧಿಕಾರ ಕೊಟ್ಟ ಜನತೆ ಇದೀಗ ಪ್ರಾದೇಶಿಕ ಪಕ್ಷಗಳನ್ನು ಅಪ್ಪಿಕೊಳ್ಳುತ್ತಿದ್ದಾರೆ. ಅಲ್ಲದೆ, ರಾಜ್ಯಾದ್ಯಂತ ನಮ್ಮ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಈ ಚುನಾವಣೆಯಲ್ಲಿ ಬಿಎಸ್ಸಾರ್‌ಗೆ ಜನತೆ ಮತ ನೀಡಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು. ಸ್ಥಳೀಯ ಚುನಾವಣೆಗೆ ರಾಜ್ಯದಲ್ಲಿ ಒಟ್ಟೂ 3,600 ಅರ್ಭ್ಯ್ಙಗಳು ಕಣದಲ್ಲಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಬಿಎಸ್ಸಾರ್‌ಗೆ ಮತ ನೀಡಿ, ಪಕ್ಷವನ್ನು ಗೆಲ್ಲಿಸಬೇಕೆಂದು ಕೇಳಿಕೊಂಡರು. ಅಲ್ಲದೆ, ಈ ಪಕ್ಷದಲ್ಲಿ ಯಾವ ಹೈಕಮಾಂಡ್ ಇಲ್ಲ. ಇಲ್ಲಿ ಜನರೇ ಹೈಕಮಾಂಡ್ ಎಂದ ಅವರು, ಬಿಎಸ್ಸಾರ್ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿದರೆ, ಜನತೆಗೆ ಉತ್ತಮ ವಾತಾವರಣ ನೀಡುವ ದೃಷ್ಟಿ ಯಿಂದ ಹುಬ್ಬಳ್ಳಿ-ಧಾರವಾಡ ಅವಳಿನಗದ ಎಲ್ಲ ಬಡಾವಣೆಗಳಲ್ಲಿ ನಾಲ್ಕು ಸಾವಿರ ಗಿಡ ನೆಡಲಾಗುವುದು. ಜಿಲ್ಲೆಯ ಜನತೆಯ ಬಹುದಿನಗಳ ಕನಸಾದ ಸೂಪರ್ ಮಾರ್ಕೆಟ್‌ನ್ನು ಸ್ಥಾಪನೆ ಮಾಡಲಾಗುವುದು ಎಂದರು.

ಮಹಿಳೆ ಸಾವು: ಕೊಲೆ ಶಂಕೆ
ಧಾರವಾಡ:  ತಾಲೂಕಿನ ಅಮ್ಮಿಬಾವಿಯ ಮನೆಯೊಂದರಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇದು ಕೊಲೆ ಎಂದು ಗ್ರಾಮಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಗ್ರಾಮದ ಮಂಗಳಾ ಮಲ್ಲಿಕಾರ್ಜುನ ಕೋಲ್ಕರ (24) ಪತಿಯ ಮನೆಯಲ್ಲಿಯೇ ಮೃತಳಾಗಿದ್ದು, ಪತಿ ಹಾಗೂ ಕುಟುಂಬಸ್ಥರು ಮನೆಯಲ್ಲಿ ಇರಲಿಲ್ಲ. ಈ ಕಾರಣದಿಂದ ಈ ಸಾವು ಕೊಲೆ ಎಂದು ಸಂಶಯ ವ್ಯಕ್ತಪಡಿಸಲಾಗಿದ್ದು, ಮಂಗಳಾ ಅವರ ತವರು ಮನೆಯವರು ಪತಿಯ ಮನೆಯವರೇ ಅವಳನ್ನು ಕೊಲೆ ಮಾಡಿದ್ದಾರೆಂದು ಗ್ರಾಮೀಣ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ದೊರೆತಿಲ್ಲ.
ಮಹಿಳೆ ನೇಣಿಗೆ ಶರಣು
ಧಾರವಾಡ:  ಇಲ್ಲಿನ ಗಾಂಧಿಚೌಕ ಹಳೆ ತಾಲೂಕು ಕಚೇರಿ ಓಣಿ ನಿವಾಸಿ ರಾಧಾಕೃಷ್ಣ ಕುಲಕರ್ಣಿ (35) ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿರೊಂಡಿದ್ದಾರೆ. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.