ಧಾರವಾಡ

11ರಂದು ಸಿದ್ಧಾರೂಢ ಮಂದಿರಕ್ಕೆ ಕಾಪ್ಟರ್ ಪುಷ್ಪಾರ್ಚನೆ

Published On :

ಹುಬ್ಬಳ್ಳಿ: ಸಿದ್ಧಾರೂಢ ಮಠದಲ್ಲಿ ಶಿವರಾತ್ರಿ ಆಚರಣೆ ಆರಂಭಗೊಂಡು 111 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮಾ. 11ರಂದು ಶಿವರಾತ್ರಿ ಆಚರಣೆ ವೇಳೆ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ ಮಾಡಲಾಗುವುದು ಎಂದು ಸಿದ್ಧಾರೂಢ ಮಠ ಟ್ರಸ್ಟ್ ಅಧ್ಯಕ್ಷ ನಾರಾಯಣಪ್ರಸಾದ ಪಾಠಕ್ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಠದಲ್ಲಿ ಮಾ. 5ರಿಂದ 13ರ ವರೆಗೆ ಶಿವರಾತ್ರಿ ಆಚರಣೆ ನಡೆಯಲಿದೆ. ಸಿದ್ಧಾರೂಢ ಸ್ವಾಮಿ ಹಾಗೂ ಗುರುನಾಥ ಸ್ವಾಮಿಗಳ ಮಂದಿರದ ಗೋಪುರ, ರಥೋತ್ಸವ ಮತ್ತು ದ್ವಾರ ಬಾಗಿಲಿಗೆ ಮಾ. 11ರಂದು ಬೆಳಗ್ಗೆ 9ರಿಂದ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ ಮಾಡಲಾಗುವುದು ಎಂದು ತಿಳಿಸಿದರು.
ಉತ್ಸವ ಮಾ. 13ರಂದು ಸಂಜೆ 6ಕ್ಕೆ ಕೌದಿ ಪೂಜೆಯೊಂದಿಗೆ ಪೂರ್ಣಗೊಳ್ಳಲಿದೆ. ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿದ್ಧಾರೂಢ ಶ್ರೀಗಳ ಹೆಸರಿಡವಂತೆ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು. ಮಠಗಳಿಗೆ ಉದಾರ ನೀಡಿದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸಿದ್ಧಾರೂಢ ಮಠಕ್ಕೆ ಮಾತ್ರ ನಯಾಪೈಸೆ ಅನುದಾನ ನೀಡಿಲ್ಲ. ಯಡಿಯೂರಪ್ಪ ನೀಡಿದ ಅನುದಾನದ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮತಿ ದೊರಕಿಸಿಕೊಡುವುದಕ್ಕೂ ನಿರಾಸಕ್ತಿ ತೋರುತ್ತಿರುವುದು ಬೇಸರ ತರಿಸಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ಉಪಾಧ್ಯಕ್ಷೆ ಜ್ಯೋತಿ ಸಾಲಿಮಠ, ಗೌರವ ಕಾರ್ಯದರ್ಶಿ ಪಿ.ಎಸ್. ಪಾಟೀಲ ಹಾಗೂ ಧರ್ಮದರ್ಶಿ ಧರಣೇಂದ್ರ ಜವಳಿ, ಬಸವರಾಜ ಕಲ್ಯಾಣಶೆಟ್ಟರ, ಯಲ್ಲಪ್ಪ ದೊಡಮನಿ, ನಾರಾಯಣ ನಿರಂಜನ, ನಾರಾಯಣ ಮೆಹರವಾಡೆ, ಮಹೇಂದ್ರ ಸಿಂಘಿ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.