ಧಾರವಾಡ

ಲೈಂಗಿಕ ಕಿರುಕುಳ: ದೂರು ತೆಗೆದುಕೊಳ್ಳದ ಪೊಲೀಸರು

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಮಾ.2
ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಇಲ್ಲಿನ ನಳಂದಾ ಕಾಲೇಜಿನ ಉಪನ್ಯಾಸಕನ ವಿರುದ್ಧ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾದ ಸದಸ್ಯರು ಶನಿವಾರ ಕಾಲೇಜು ಎದುರು ಪ್ರತಿಭಟನೆ ಮಾಡಿದ್ದಾರೆ.
ನಳಂದಾ ಕಾಲೇಜಿನ ಉಪನ್ಯಾಸಕ ಕೃಷ್ಣಾ ಮಗುದುಮ್ ಅವರು ಕಾಲೇಜು ವಿದ್ಯಾರ್ಥಿನಿಯನ್ನು ಸ್ಟಾಫ್ ರೂಂಗೆ ಕರೆದು ಮೈ ಮುಟ್ಟುವುದು ಸೇರಿದಂತೆ ಇನ್ನಿತರ ಕೀಟಲೆ ಮಾಡಿದ್ದಾರೆ. ಇದರ ಜೊತೆಗೆ ವಿದ್ಯಾರ್ಥಿನಿಯೊಂದಿಗೆ ಫೇಸ್‌ಬುಕ್‌ನಲ್ಲಿ ಚಾಟ್ ಮಾಡಿದ್ದು, ಅಲ್ಲದೆ ನನ್ನೊಂದಿಗೆ ಸಹಕರಿಸಿದರೆ ಪರೀಕ್ಷೆಯಲ್ಲಿ ನಕಲು ಮಾಡುವುದಕ್ಕೆ ಅವಕಾಶ ಮಾಡಿಕೊಡುತ್ತೇನೆ ಎಂದು ಆಮೀಷ ಒಡ್ಡಿದ್ದಾರೆ. ಈ ಕುರಿತು 'ಕನ್ನಡಪ್ರಭ'ದೊಂದಿಗೆ ಮಾತನಾಡಿದ ಎನ್‌ಎಸ್‌ಯುಐ ರಾಷ್ಟ್ರೀಯ ಪ್ರತಿನಿಧಿ ರಜತ್, ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಘಟನೆ ನಳಂದಾ ಕಾಲೇಜಿನಲ್ಲಿ ನಡೆದಿದೆ ಎಂದರು.  
ಈ ಕುರಿತು ಕಾಲೇಜು ಪ್ರಾಂಶುಪಾಲ ಶಿವಪ್ರಸಾದ ಅವರಿಗೆ ದೂರು ನೀಡಿದರೆ ಇಡೀ ಘಟನೆ ಕಾಲೇಜಿನ ಹೊರಗೆ ನಡೆದಿದ್ದು ನಮಗೆ ಸಂಬಂಧವಿಲ್ಲ. ಕಾಲೇಜಿನ ಸ್ಟಾಫ್ ರೂಂನಲ್ಲಿ ನಡೆದಿದೆ ಎನ್ನಲಾಗಿರುವ ಲೈಂಗಿಕ ಕಿರುಕುಳ ಘಟನೆ ಕುರಿತು ತನಿಖೆ ಕೈಗೊಂಡು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರಿಗೆ ಹೇಳಿದ್ದಾರೆ.
ಪ್ರತಿಭಟನಾಕಾರರಿಗೆ ಲಾಠಿ ರುಚಿ: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ ಎಂದು ಹೇಳಿದ ಗೋಕುಲ್ ರೋಡ್ ಪೊಲೀಸ್ ಠಾಣೆ ಸಿಬ್ಬಂದಿ, ಪ್ರತಿಭಟನೆ ನಿರತ ವಿದ್ಯಾರ್ಥಿಗಳಿಗೆ ಲಾಠಿ ರುಚಿ ತೋರಿಸಿದ್ದಾರೆ ಎನ್ನಲಾಗಿದೆ.
ಸಿಪಿಐ ಅವರಿಗೆ ಸಾಕಷ್ಟು ಕೆಲಸವಿದ್ದು, ಅವರು ಬಂದ ಮೇಲೆ ದೂರು ದಾಖಲಿಸಿಕೊಳ್ಳಲಾಗುವುದು ಎಂದು ಹೇಳಿದ ಪೊಲೀಸರು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಂದ ದೂರು ಸ್ವೀಕರಿಸಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.