ಧಾರವಾಡ

ಸ್ವಾಭಿಮಾನದ ಬದುಕು ಬಾಳಿ: ಪರಮಸುಖಾನಂದಜಿ ಕರೆ

Published On :

ಹುಬ್ಬಳ್ಳಿ: ಉನ್ನತ ನೈತಿಕ ಮೌಲ್ಯಗಳೊಂದಿಗೆ ಸ್ವಾಭಿಮಾನದ ಬದುಕು ಬಾಳುವುದು ಪ್ರತಿಯೊಬ್ಬ ಪ್ರಜೆಯ ಗುರಿಯಾಗಬೇಕು ಎಂದು ಬೆಂಗಳೂರಿನ ಸ್ವಾಮಿ ಪರಮಸುಖಾನಂದಜಿ ಹೇಳಿದರು.
ನಗರದ ಕೆಎಲ್ಇ ಐಎಂಎಸ್ಆರ್ (ಎಂಬಿಎ) ಮಹಾವಿದ್ಯಾಲಯದಲ್ಲಿ ಜಿ.ಕೆ. ಕಾನೂನು ಮಹಾವಿದ್ಯಾಲಯ ಹಾಗೂ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಯುವ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯ ಬೆಳೆಸುವಲ್ಲಿ ಮತ್ತು ನೈತಿಕ ಪ್ರಜ್ಞೆ ಹೆಚ್ಚಿಸುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು. ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ತಮ್ಮ ಬೌದ್ಧಿಕ ಸಾಮರ್ಥ್ಯ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಬೇಕು ಎಂದರು. ಕುನ್ನೂರಿನ ಶಾಂತಿ ಕುಟೀರದ ಶ್ರೀ ಕೃಷ್ಣ ಮಹಾರಾಜ ಮಾತನಾಡಿ, ಯುವಕರು ಸ್ವಸಾಮರ್ಥ್ಯದಲ್ಲಿ ಹೆಚ್ಚು ನಂಬಿಕೆ ಇಡಬೇಕು. ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರಚಿತ್ತದಿಂದ ಅಧ್ಯಯನ ಮಾಡಲು ಬ್ರಹ್ಮಚರ್ಯ ಸಹಕಾರಿಯಾಗಿದ್ದು, ಈ ತತ್ವವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.
ಯುವ ಭಾರತ ಕರ್ನಾಟಕದ ರಾಜ್ಯಾಧ್ಯಕ್ಷ ನಿಕೇತ್ ಮಾತನಾಡಿದರು. ಪ್ರಾಚಾರ್ಯ ಡಾ. ಜಿ.ಬಿ. ಪಾಟೀಲ ಸ್ವಾಗತಿಸಿದರು. ಡಾ. ಪಿ.ಬಿ. ರೂಡಗಿ ಅವರು ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.