ಧಾರವಾಡ

ಜಗಳ: ಓರ್ವನಿಗೆ ಗಂಭೀರ ಗಾಯ

Published On :

ಹುಬ್ಬಳ್ಳಿ: ಸ್ನೇಹಿತರ ಮಧ್ಯೆ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಹೊಡೆದಾಟ ಒಬ್ಬ ಗಂಭೀರ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ವಿದ್ಯಾನಗರದ ಬಿವಿಬಿ ಕಾಲೇಜ್ ಬಳಿ ನಡೆದಿದೆ. ಬಸವರಾಜ ನೀಲಣ್ಣವರ (21) ಎಂಬುವನೇ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬಸವರಾಜ ಹಳೆಯ ಸ್ನೇಹಿತರೇ ಆದ ಕಿರಣ ಹಾಗೂ ನಿತ್ಯಾನಂದ ಎಂಬಿಬ್ಬರೇ ಹಲ್ಲೆ ನಡೆಸಿದವರಾಗಿದ್ದು, ಎಲ್ಲರೂ ಉಣಕಲ್ ಕೊರವಿ ಓಣಿ ನಿವಾಸಿಗಳಾಗಿದ್ದಾರೆ.
ಹಳೆಯ ಸ್ನೇಹಿತನಾಗಿದ್ದುಕೊಂಡು ಮಾತನಾಡುವುದನ್ನು ಬಿಟ್ಟಿದ್ದಕ್ಕೆ ಕೋಪಗೊಂಡ ಕಿರಣ ಹಾಗೂ ನಿತ್ಯಾನಂದ ಇಬ್ಬರು ಕೂಡಿಕೊಂಡು ಸೋಮವಾರ ಬೆಳಗ್ಗೆ 7.30ರ ಸುಮಾರಿಗೆ ಬಸವರಾಜನ ಜತೆಗೆ ಜಗಳ ತೆಗೆದು ಕಾಲಿಗೆ ರಾಡ್‌ನಿಂದ ಹೊಡೆದಿದ್ದಾರೆನ್ನಲಾಗಿದೆ.
ಸುದ್ದಿ ತಿಳಿಯುತ್ತಿದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿ ವಿದ್ಯಾನಗರ ಠಾಣೆ ಇನ್‌ಸ್ಪೆಕ್ಟರ್ ಗಿರೀಶ ರೋಡಕರ್, ಗಾಯಾಳನ್ನು ಕಿಮ್ಸ್ ಆಸ್ಪತ್ರೆಗೆ ಸಾಗಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.