ಧಾರವಾಡ

ನಾಳೆಯಿಂದ ಇನ್‌ಸಿಗ್ನಿಯಾ-2013

Published On :

ಧಾರವಾಡ: ಇಲ್ಲಿನ ಎಸ್‌ಡಿಎಂ ಎಂಜಿನಿಯರಿಂಗ್ ಕಾಲೇಜು ಮಾ.21ರಿಂದ 23ರವರೆಗೆ ಕಾಲೇಜು ಆವರಣದಲ್ಲಿ 80 ವಿವಿಧ ತಾಂತ್ರಿಕ, ಸಾಂಸ್ಕೃತಿಕ ಹಾಗೂ ಔದ್ಯೋಗಿಕ ರಾಷ್ಟ್ರ ಮಟ್ಟದ ಸ್ಪರ್ಧೆ ಇನ್‌ಸಿಗ್ನಿಯಾ-2013 ಹಮ್ಮಿಕೊಂಡಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾಲೇಜು ಪ್ರಾಚಾರ್ಯ ಡಾ. ಎಸ್. ಮೋಹನ್‌ಕುಮಾರ್, ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತಮಿಳುನಾಡಿನ 100ಕ್ಕೂ ಹೆಚ್ಚು ತಾಂತ್ರಿಕ ಕಾಲೇಜುಗಳಿಂದ 400 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಮೂರು ದಿನಗಳಲ್ಲಿ ರೋಬೋಟಿಕ್ಸ್, 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ವಿಷಯ ಮಂಡನೆ, ನೃತ್ಯ ಹಾಗೂ ಸಂಗೀತ ಸ್ಪರ್ಧೆಗಳು, ಚರ್ಚಾ ಸ್ಪರ್ಧೆ, ಸಂಸತ್ತಿನ ಸಂಗ್ರಾಮ, ಗೇಮಿಂಗ್, ತಾಂತ್ರಿಕ ಕ್ವಿಜ್ ನಡೆಯಲಿದೆ ಎಂದರು. ಎಸ್‌ಡಿಎಂ ಕಾಲೇಜು ವಿದ್ಯಾರ್ಥಿಗಳು ತಾಂತ್ರಿಕ ಅನ್ವೇಷಣೆಯಲ್ಲಿ ಮುಂದಿದ್ದು, ಕಾಲೇಜಿನ ಮೂವರು ವಿದ್ಯಾರ್ಥಿಗಳು ಏಪ್ರಿಲ್‌ನಲ್ಲಿ ಕೊಲಂಬಿಯಾದಲ್ಲಿ ನಡೆಯಲಿರುವ ಇಂಡೋ-ಯುಎಎಸ್ ರೋಬೋ ಅಂತಾರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿರುವುದು ಹೆಮ್ಮೆಯೇ ಸರಿ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.