ಆಧಾರ್: ಅರ್ಜಿ ಸ್ಥಿತಿ ಹು-ಧಾ ಒನ್ಗಳಲ್ಲಿ ಲಭ್ಯ
ಧಾರವಾಡ: ಆಧಾರ್ ನೋಂದಣಿ ಆಗಿ ಇಲ್ಲಿವರೆಗೆ ಕಾರ್ಡ್ ಸ್ವೀಕರಿಸದಿರುವವರು ತಮ್ಮ ಅರ್ಜಿ ಸ್ಥಿತಿಯನ್ನು ಹುಬ್ಬಳ್ಳಿ-ಧಾರವಾಡ ಒನ್ ಕೇಂದ್ರಗಳ ಮೂಲಕ ಪಡೆಯಬಹುದಾಗಿದೆ. ವಿವರ ಪಡೆಯಲು ನೋಂದಣಿದಾರರು ಆಧಾರ ರಸೀದಿಯನ್ನು ಕಡ್ಡಾಯವಾಗಿ ತರಬೇಕು. ಹಾಗೂ ಸೇವಾ ಶುಲ್ಕವಾಗಿ ರು. 9 ಪಾವತಿಸಬೇಕು. ನೋಂದಣಿ ಸ್ಥಿತಿ ತಿಳಿಯಲು ಅಥವಾ ಸಂಖ್ಯೆ ಹಂಚಿಕೆಯಾಗಿದ್ದಲ್ಲಿ ಅದರ ಮುದ್ರಿತ ಪ್ರತಿ ನೀಡುವ ಸೌಲಭ್ಯವೂ ಈ ಕೇಂದ್ರಗಳಲ್ಲಿ ಲಭ್ಯವಿದೆ. ಆಧಾರ್ ನೋಂದಣಿಗೆ ಅರ್ಜಿ ಸಲ್ಲಿಸಿದವರು ಈ ಸೌಲಭ್ಯದ ಪ್ರಯೋಜನ ಪಡೆಯಲು ರಾಜ್ಯದ ಇ-ಆಡಳಿತ ಸಿಇಓ ಡಿ.ಎಸ್. ರವೀಂದ್ರನ್ ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಕೇಂದ್ರಗಳು ಪ್ರತಿ ದಿನ ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಕಾರ್ಯನಿರ್ವಹಿಸುತ್ತವೆ.
ಮತದಾರ ಜಾಗೃತಿ: ಜಿಲ್ಲಾಮಟ್ಟದ ಸಮಿತಿ ಸಭೆ
ಧಾರವಾಡ: ಅರ್ಹ ಮತದಾರರ ನೋಂದಣಿ ಹಾಗೂ ಜನ ಮತದಾನದಲ್ಲಿ ಪಾಲ್ಗೊಳ್ಳುವುದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿಯೊಂದು ಜಿಲ್ಲೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಮತದಾನದಲ್ಲಿ ಪಾಲ್ಗೊಳ್ಳುವಿಕೆ ಕುರಿತ ಸಮಿತಿ ರಚಿಸಲು ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಜಿಪಂ ಸಿಇಓ ಪಿ.ಎ. ಮೇಘಣ್ಣವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಿ ಜಿಲ್ಲಾಧಿಕಾರಿಗಳಾದ ಸಮೀರ್ ಶುಕ್ಲ ಆದೇಶ ಹೊರಡಿಸಿದ್ದಾರೆ. ಸಮಿತಿ ಮೊದಲ ಸಭೆ ಮಾ. 25ರಂದು ಜಿಪಂ ಸಭಾಂಗಣದಲ್ಲಿ ಮುಂಜಾನೆ 10.30ಕ್ಕೆ ಜರುಗಲಿದೆ. ಸಂಬಂಧಿತ ಸದಸ್ಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿರಲು ಸಮಿತಿ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ಪಿ.ಎಸ್. ಪರ್ವತಿ ತಿಳಿಸಿದ್ದಾರೆ.
ಶಾಶ್ವತ ಕುಡಿಯುವ ನೀರಿನ ಯೋಜನೆ ಉದ್ಘಾಟನೆ
ಹುಬ್ಬಳ್ಳಿ: ನವಲಗುಂದ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಿರ್ಮಿಸಿರುವ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಶಂಕರ ಪಾಟೀಲ ಮುನೇನಕೊಪ್ಪ ಇತ್ತೀಚೆಗೆ ಉದ್ಘಾಟಿಸಿದರು. ಕುಸುಗಲ್ ಗ್ರಾಮದಲ್ಲಿ ಬಹು ವರ್ಷಗಳ ಬೇಡಿಕೆಯಾದ ಶಾಶ್ವತ ಕುಡಿಯುವ ನೀರು ಯೋಜನೆಗೆ ಜಲನಿರ್ಮಲ ಯೋಜನೆಯಡಿ ಸುಮಾರು 2.75 ಕೋಟಿ ವೆಚ್ಚದಲ್ಲಿ ಕಾಮಗಾರಿ ಪೂರೈಸಲಾಗಿದೆ. ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಹಾದೇವಿ ಗಿಡ್ನವರ, ಅಡಿವೆಪ್ಪ ಮನಮಿ, ಎಪಿಎಂಸಿ ಸದಸ್ಯರಾದ ಕೊಟ್ರೇಶ ಕುರಹಟ್ಟಿ, ವಿ.ಎಸ್. ಕೆಂಚನಗೌಡ್ರ, ಕಾಶಿನಾಥ ಬನ್ನಿಕೊಪ್ಪ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

