ಧಾರವಾಡ

ವೃದ್ಧ ನಾಪತ್ತೆ: ಪತ್ತೆಗೆ ಸೂಚನೆ

Published On :

ಹುಬ್ಬಳ್ಳಿ: ಮಂಟೂರು ರಸ್ತೆಯ ಕೃಪಾನಗರದ 93 ವರ್ಷದ ವಯೋವೃದ್ಧರೊಬ್ಬರು ಕಾಣೆಯಾಗಿರುವ ಬಗ್ಗೆ ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆ. ಸಾಲೋಮನ್ ಕಲಕುಂಟ್ಲ ಎಂಬುವರೇ ಕಾಣೆಯಾದವರು. ಮಾ. 19ರಂದು ಸಂಜೆ ಮನೆಯಿಂದ ಹೋದವರು ಈವರೆಗೂ ವಾಪಸ್ ಬಂದಿಲ್ಲ ಎಂದು ಅವರ ಸಂಬಂಧಿಕರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. 4 ಅಡಿ 8 ಇಂಚು ಎತ್ತರದ ಸಾಲೋಮನ್ ಕನ್ನಡ, ಹಿಂದಿ, ತೆಲಗು ಭಾಷೆ ಬಲ್ಲವರಾಗಿದ್ದು, ಯಾರಿಗಾದರೂ ಈ ವ್ಯಕ್ತಿ ಕಂಡುಬಂದಲ್ಲಿ ಬೆಂಡಿಗೇರಿ ಠಾಣೆ ದೂ. ಸಂ. (0836) 2233526 ಅಥವಾ ಕಂಟ್ರೋಲ್ ರೂಮ್ ನಂ. 2233555ಗೆ ಸಂಪರ್ಕಿಸುವಂತೆ ಕೋರಲಾಗಿದೆ.
ಅಪಫಾತ: ಮೂವರಿಗೆ ಗಾಯ
ಹುಬ್ಬಳ್ಳಿ: ಕಾರ್ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಸಂಭವಿಸಿದ ರಸ್ತೆ ಅಪಫಾತದಲ್ಲಿ ಮೂವರು ಗಾಯಗೊಂಡ ಘಟನೆ ಭಾನುವಾರ ಬೆಳಗ್ಗೆ ಗದಗ ರಸ್ತೆಯ ಒಂಟಿ ಹನುಮಪ್ಪನ ದೇವಸ್ಥಾನದ ಬಳಿ ಸಂಭವಿಸಿದೆ. ಗಾಯಗೊಂಡ ಮೂವರ ಪೈಕಿ ಒಬ್ಬನ ತಲೆಗೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಗಾಯಾಳುಗಳೆಲ್ಲರೂ ಉಪಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.