ನಲವಡಿ: ಶೇ. 81 ಮತದಾನ
ನಲವಡಿ: ನವಲಗುಂದ ತಾಲೂಕಿನ ನಲವಡಿ ಗ್ರಾಮದ ಮೂರು ಮತಗಟ್ಟೆಗಳ ವ್ಯಾಪ್ತಿಯಲ್ಲಿ ಶೇ. 81.19 ಮತದಾನವಾಗಿದೆ. ಭಾನುವಾರ ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಮತದಾನ ಶಾಂತಿಯತವಾಗಿ ಜರುಗಿದ್ದು, ಗ್ರಾಮದ ಮೂರು ವಾರ್ಡುಗಳು ಸೇರಿ ಒಟ್ಟು 2701 ಮತದಾರರ ಪೈಕಿ 2193 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಮೊದಲ ವಾರ್ಡಿನ 923 ಮತದಾರರಲ್ಲಿ 792, 2ನೇ ವಾರ್ಡಿನ 663ರಲ್ಲಿ 510, 3ನೇ ವಾರ್ಡಿನ 1115ರ ಪೈಕಿ 891 ಮತದಾರರು ಮತದಾನ ಮಾಡಿದ್ದಾರೆ. ಒಟ್ಟಿನಲ್ಲಿ ಗ್ರಾಮದ 3 ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದೆ ಮತದಾನ ಶಾಂತಿಯುತವಾಗಿ ಜರುಗಿದೆ ಎಂದು ಮೊದಲನೇ ಮತಗಟ್ಟೆ ಕೇಂದ್ರದ ಚುನಾವಣಾಧಿಕಾರಿ ವಿ.ಎಸ್. ಬಿಳ್ಳೂರು 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

