ಧಾರವಾಡ

ನಾಲ್ಕನೇ ಬಾರಿ ನಾಲ್ಕನೇ ಸ್ಥಾನ

Published On :

ಹುಬ್ಬಳ್ಳಿ: ಧಾರವಾಡ ಚೌಗುಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಸತತ ನಾಲ್ಕನೇ ಬಾರಿ ಪಿಯುಸಿ ಫಲಿತಾಂಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ. ಪ್ರಸಕ್ತ ಸಾಲಿನ ಪಿಯು ಪರೀಕ್ಷೆಯಲ್ಲಿ ಮಹಾವಿದ್ಯಾಲಯದ ಫಲಿತಾಂಶ ಶೇ 99.74 ಆಗಿದ್ದು, ನಾಲ್ಕನೇ ಬಾರಿಗೆ ಪ್ರಥಮ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕಾಲೇಜು ವಿದ್ಯಾರ್ಥಿ ಕುಲದೀಪ ಅರುಣ್ 577 (ಶೇ.96.16), ಭಾವನಾ ಭಾಗವತ್ 577 (ಶೇ.96.16) ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಶೇಖರಗೌಡ ಪಾಟೀಲ (571) ಮತ್ತು ಸ್ಮೃತಿ ಪಾಲೇಕರ್ 569 ಅಂಕಗಳನ್ನು ಪಡೆದು ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿದ್ದಾರೆ. ಕುಲದೀಪ ಅರುಣ್ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದಾನೆ. ಭೌತಶಾಸ್ತ್ರದಲ್ಲಿ 254, ರಸಾಯನಶಾಸ್ತ್ರದಲ್ಲಿ 240, ಗಣಿತಶಾಸ್ತ್ರದಲ್ಲಿ 117 ಮತ್ತು ಜೀವಶಾಸ್ತ್ರದಲ್ಲಿ 98 ಮತ್ತು ಸಂಖ್ಯಾಶಾಸ್ತ್ರದಲ್ಲಿ 98 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.