ಧಾರವಾಡ

ಮತ ಎಣಿಕೆ: ನಿಷೇಧಾಜ್ಞೆ ಜಾರಿ

Published On :

ಗದಗ: ಮೇ 5ರಂದು ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಮತಗಳ ಎಣಿಕೆ ಕಾರ್ಯವು ಮೆ. 8ರಂದು ನಗರದ ಜ. ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ. ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸುವಾಗ ಸಾರ್ವಜನಿಕ ಶಾಂತತೆಗೆ ಭಂಗ ಉಂಟಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಗದಗ ಜಿಲ್ಲಾ ವ್ಯಾಪ್ತಿಯಲ್ಲಿ  ಮೇ 8ರಂದು ಬೆಳಗ್ಗೆ 8ರಿಂದ ಮೇ 9ರ ಬೆಳಗ್ಗೆ 8ರ ವರೆಗೆ ದಂಡ ಸಂಹಿತೆ 144 ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಸ್.ಟಿ.ಅಂಜನಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ 5 ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಮೆರವಣೆಗೆ ಅಥವಾ ಸಭೆ ಜರುಗಿಸುವುದನ್ನು ನಿಷೇಧಿಸಿದೆ. ಬಂದೂಕು, ಭರ್ಚಿ, ಕತ್ತಿ, ಚಾಕು, ಕುಡುಗೋಲು, ಕೊಡಲಿ, ಬಡಿಗೆ ಇತ್ಯಾದಿ ವಸ್ತುಗಳು ಸೇರಿದಂತೆ ಯಾವುದೇ ಮಾರಕಾಸ್ತ್ರಗಳನ್ನು ಮತ್ತು ಸ್ಫೋಟಕ ವಸ್ತುಗಳನ್ನು ಸಂಗಡ ಕೊಂಡೊಯ್ಯುವುದನ್ನು ನಿಷೇಧಿಸಿದೆ. ಯಾವುದೇ ಜೀವಂತ ಅಥವಾ ಮೃತ ವ್ಯಕ್ತಿಯ ಭಾವಚಿತ್ರ ಅಥವಾ ಪ್ರತಿ ರೂಪವನ್ನು ಪ್ರದರ್ಶಿಸುವ ಇಲ್ಲವೇ ಇತರೆ ಕಾರ್ಯವನ್ನು ನಿಷೇಧಿಸಲಾಗಿದೆ. ಸೂಕ್ತ ಅಧಿಕಾರ ಹೊಂದಿದ ಅಧಿಕಾರಿಗಳ ಅಭಿಪ್ರಾಯದಲ್ಲಿ ಸಾರ್ವಜನಿಕ ಹಿತಕ್ಕೆ ನೈತಿಕ ಮಟ್ಟಕ್ಕೆ ಧಕ್ಕೆ ತರುವ ಅಥವಾ ಸುರಕ್ಷತೆಗೆ ಧಕ್ಕೆ ಬರುವುದೆಂದು ಪರಿಗಣಿಸುವ ಯಾವುದೇ ಸಾರ್ವಜನಿಕವಾಗಿ ಕೂಗಾಡುವುದು, ಹಾಡುವುದು, ವಾದ್ಯ ಬಾರಿಸುವುದು, ಅಣಕವಾಡುವುದು ಮುಂತಾದ ಕಾರ್ಯಗಳಿಗೆ ನಿಷೇಧಿಸಲಾಗಿದೆ. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.