ಧಾರವಾಡ

ಬಸವಣ್ಣ ಪುತ್ಥಳಿ ಸ್ಥಾಪನೆಗೆ ಗುದ್ದಲಿ ಪೂಜೆ

Published On :

ಧಾರವಾಡ:  ವಿಶ್ವಗುರು ಬಸವಣ್ಣನವರ ಪುತ್ಥಳಿ ಸ್ಥಾಪನೆಗೆ ತಾಲೂಕಿನ ಯರಿಕೊಪ್ಪ ಗ್ರಾಮದಲ್ಲಿ ಭಾನುವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು. ಬಸವ ಜಯಂತಿ ಅಂಗವಾಗಿ ಗ್ರಾಮದ ಪಂಚಾಯ್ತಿ ಎದುರಿನ ಜಾಗೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿ ಪುತ್ಥಳಿ ಸ್ಥಾಪನಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಬಿಜೆಪಿ ಮುಖಂಡ ವೀರೇಶ ಸಲಗಾರ ನೀಡಲಿರುವ ಸುಮಾರು ರು. 1 ಲಕ್ಷ ವೆಚ್ಚದಲ್ಲಿ ಪುತ್ಥಳಿ ನಿರ್ಮಿಸಿ ಪ್ರತಿಷ್ಠಾಪಿಸಲು ಇದೇ ಸಂದರ್ಭದಲ್ಲಿ ತೀರ್ಮಾನಿಸಲಾಯಿತು. ತಾಲೂಕು ಬಿಜೆಪಿ ಅಧ್ಯಕ್ಷ ವಿರೂಪಾಕ್ಷಪ್ಪ ನೂಲ್ವಿ, ಅಳ್ನಾವರ ಬ್ಲಾಕ್ ಅಧ್ಯಕ್ಷ ದಶರಥರಾವ್ ದೇಸಾಯಿ, ಗ್ರಾಪಂ ಅಧ್ಯಕ್ಷ ಹನುಮಂತ ಪೂಜಾರ, ಸದಸ್ಯೆ ಮಹಾದೇವಿ ಹುಲೆಪ್ಪನವರ, ಗಣ್ಯರಾದ ಶಂಕ್ರಪ್ಪ ಬೈಲವಾಡ, ಶಂಕ್ರಪ್ಪ ಅಮ್ಮಿನಬಾವಿ, ಮಹಾಂತಯ್ಯ ಮಠದ, ಬಸನಗೌಡ ಪಾಟೀಲ, ಪರಮೇಶ್ವರ ಹುಲೆಪ್ಪನವರ, ಹನುಮಂತಗೌಡ ಪಾಟೀಲ, ಅರ್ಜುನ ಮಾದರ, ಯಲ್ಲಪ್ಪ ಹುಲೆಪ್ಪನವರ, ಮಹಾದೇವಿ ಸೇಬಣ್ಣವರ ಸೇರಿದಂತೆ ಗ್ರಾಮದ ಮಹಿಳೆಯರು, ಯುವಕರು ಈ ಸಂದರ್ಭದಲ್ಲಿ ಇದ್ದರು. ಬಸವ ಜಯಂತಿ ಅಂಗವಾಗಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ಸಂಭ್ರಮದಿಂದ ಜರುಗಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.