ಧಾರವಾಡ

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ: ದೊಡ್ಡಗೌಡರ

Published On :

ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಮೇ 14
ಪಟ್ಟಣದ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಸರಿಯಾಗಿ ತಮ್ಮ ಕಾರ್ಯ ನಿರ್ವಹಿಸದೇ ಇರುವುದರಿಂದ ರೋಗಿಗಳು ಪರದಾಡುವಂತಾಗಿದೆ. ಸೋಮವಾರ ರಾತ್ರಿ ಅಪಘಾತದಲ್ಲಿ ಗಾಯಗೊಂಡವರು ಚಿಕಿತ್ಸೆ ನೀಡಬೇಕಾದ ವೈದ್ಯರು ಆಸ್ಪತ್ರೆಯಲ್ಲಿ ಇಲ್ಲದೆ ತೊಂದರೆ ಅನುಭವಿಸುವಂತಾಯಿತು. ತಪ್ಪಿತಸ್ಥ ವೈದ್ಯ ಸಿಬ್ಬಂದಿ ಮೇಲೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡರ ಹೇಳಿದರು.
ಅವರು ಮಂಗಳವಾರ ಮಧ್ಯಾಹ್ನ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಸಭೆಯಲ್ಲಿ ವೈದ್ಯ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಖಾರವಾಗಿ ಮಾತನಾಡಿದರು. ವೈದ್ಯರ ನಿರ್ಲಕ್ಷ್ಯದಿಂದಾಗಿ ಜನತೆ ಆಕ್ರೋಶಗೊಂಡು ಆಸ್ಪತ್ರೆಗೆ ಬೆಂಕಿ ಹಚ್ಚುವ ಕಾರ್ಯಕ್ಕೆ ಮುಂದಾಗುವ ಹಂತಕ್ಕೆ ಹೋಗಿದ್ದರು. ಕೆಲ ಸಾರ್ವಜನಿಕರು ಆಸ್ಪತ್ರೆಯ ನರ್ಸ್‌ಗಳಿಗೆ ಸಹಕಾರ ನೀಡಿ, ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುವಲ್ಲಿ ನೆರವಾದರು. ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸಗೆ ಗಾಯಾಳುಗಳನ್ನು ಸಾಗಿಸಬೇಕಾಯಿತು. ರಾತ್ರಿ ವೇಳೆ ಕರ್ತವ್ಯದ ಮೇಲೆ ಇರಬೇಕಾದ ವೈದ್ಯರು ಇಲ್ಲದೆ ಇರುವುದರಿಂದ ಜನ ಸಾಮಾನ್ಯರಿಗೆ ಸಮಸ್ಯೆಯಾಗುತ್ತಿದೆ. ಸಂಬಂಧಿಸಿದ ವೈದ್ಯರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸೋಮವಾರ ರಾತ್ರಿ ಕರ್ತವ್ಯದ ಮೇಲೆ ಇಲ್ಲದ ವೈದ್ಯರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗೆ ತಿಳಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ವೈದ್ಯಾಧಿಕಾರಿ ಡಾ. ಡಿ.ಬಿ. ಚೆನ್ನಶೆಟ್ಟಿ, ತಾಲೂಕು ವೈದ್ಯಾಧಿಕಾರಿ ಡಾ. ಬೆಟಗೇರಿ, ಡಾ. ಕಬಾಡಿ, ಡಾ. ಸಾಮುದ್ರಿ, ಡಾ. ಎಸ್.ಬಿ. ಜವಾಯಿ, ಡಾ.ಪುಷ್ಪಲತಾ, ಜೆ. ವೆಂಕಟಸ್ವಾಮಿ, ನೀಲಪ್ಪ ಹತ್ತಿ, ಪುರಸಭೆಯ ಸದಸ್ಯ ರಾಮಣ್ಣ ರಿತ್ತಿ, ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.