ಧಾರವಾಡ

ನಾಳೆ ಪುಟ್ಟರಾಜರ ಮೂರ್ತಿ ಪ್ರತಿಷ್ಠಾಪನೆ

Published On :

ಕನ್ನಡಪ್ರಭ ವಾರ್ತೆ, ಗದಗ, ಮೇ 14
ಅಂಧ ಅನಾಥರ ಬಾಳಿಗೆ ಬೆಳಕು ನೀಡಿದ ಗಾನಯೋಗಿ ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ ಮೂರ್ತಿ ಪ್ರತಿಷ್ಠಾಪನೆ ಮೇ 16ರಂದು ಮುಳಗುಂದ ರಸ್ತೆಯ ಸರ್ಕಾರಿ ನೌಕರರ ಸಮುದಾಯ ಭವನದ ಆವರಣದಲ್ಲಿ ನಿರ್ಮಾಣಗೊಂಡ ಪುಟ್ಟರಾಜ ಮಂದಿರದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಗದಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರೇಮನಾಥ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಗದಗ ಜಿಲ್ಲಾ ನೌಕರ ಬಂಧುಗಳ ಸಂಕಲ್ಪದಂತೆ ನೌಕರರ ಸಮುದಾಯ ಭವನದಲ್ಲಿ ನಿತ್ಯ ನಡೆಯುವ ವಿವಿಧ ವಿಧಾಯಕ ಕಾರ್ಯಕ್ರಮಗಳಿಗೆ ಪುಟ್ಟರಾಜರ ಕೃಪೆ ಇರಲಿ ಎಂಬು ಸದಾಶಯದೊಂದಿಗೆ ಸುಮಾರು ರು. 20 ಲಕ್ಷ ವೆಚ್ಚದಲ್ಲಿ ಸುಂದರವಾದ ಪುಟ್ಟರಾಜ ಮಂದಿರ ನಿರ್ಮಾಣ ಮಾಡಲಾಗಿದೆ. ಸಮುದಾಯ ಭವನ ನಿರ್ಮಾಣಕ್ಕೆ ಪುಟ್ಟರಾಜ ಕವಿ ಗವಾಯಿಗಳು 1997ರಲ್ಲಿ ಶಂಕುಸ್ಥಾಪನೆ ಮಾಡಿದ್ದರು. 2007ರಲ್ಲಿ ಅವರ ಅಮೃತ ಹಸ್ತದಿಂದಲೇ ಉದ್ಘಾಟನೆಯಾದದ್ದು ಒಂದು ವಿಶೇಷ. ಆ ಸಮಯದಲ್ಲಿ ಪುಟ್ಟಯ್ಯಜ್ಜನವರು ಕುಳಿತ ಸ್ಥಳದಲ್ಲಿಯೇ ಈಗ ಪುಟ್ಟರಾಜ ಮಂದಿರ ನಿರ್ಮಾಣವಾಗಿದ್ದು ಅತ್ಯಂತ ವಿಶೇಷವಾದ ಸಂಗತಿ.
ಪುಟ್ಟರಾಜರ ಮೂರ್ತಿಯನ್ನು ಜೈಪುರದಲ್ಲಿ ನಿರ್ಮಿಸಿದ್ದು ಮೇ 15ರಂದು ಸಂಜೆ 4ಕ್ಕೆ ವೀರೇಶ್ವರ ಪುಣ್ಯಾಶ್ರಮದಿಂದ ಮೆರವಣಿಗೆಯ ಮೂಲಕ ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ ನೌಕರರ ಸಮುದಾಯ ಭವನಕ್ಕೆ ತರಲಾಗುವುದು. ಮೇ 16ರಂದು ನಡೆಯುವ ಪುಟ್ಟರಾಜರ ಮೂರ್ತಿ ಪ್ರತಿಷ್ಠಾಪನೆಯ ಜತೆಗೆ ವಿವಿಧ ವಿಧಾಯಕ ಕಾರ್ಯಕ್ರಮ ಆಯೋಜಿಸಲಾಗಿದೆ. ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು, ಗದಗ-ಅಡ್ನೂರು ಮಠದ ಪಂಚಾಕ್ಷರ ಶಿವಾಚಾರ್ಯ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು.
ಶಾಸಕರಾದ ಎಚ್.ಕೆ. ಪಾಟೀಲ, ಬಿ.ಆರ್. ಯಾವಗಲ್ಲ, ಜಿ.ಎಸ್. ಪಾಟೀಲ, ರಾಮಕೃಷ್ಣ ದೊಡ್ಡಮನಿ, ಮಾಜಿ ಶಾಸಕ ಡಿ.ಆರ್. ಪಾಟೀಲ, ಜಿಪಂ ಸಿಇಓ ವೀರಣ್ಣ ತುರಮರಿ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎಲ್.ಭೈರಪ್ಪ, ಕಾರ್ಯದರ್ಶಿ ಪಟೇಲ್ ಪಾಂಡು ಮುಂತಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗದಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರೇಮನಾಥ ಗರಗ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ರವಿ ಗುಂಜಿಕರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.