ಧಾರವಾಡ

'ಪರಾರಿ'ಗೆ ಉತ್ತಮ ಪ್ರತಿಕ್ರಿಯೆ: ಚಿತ್ರ ನಿರ್ದೇಶಕ ಚೈತನ್ಯ

Published On :

ಹುಬ್ಬಳ್ಳಿ: ಹಾಸ್ಯ ಪ್ರಧಾನವಾಗಿರುವ ಪರಾರಿ ಕನ್ನಡ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದ್ದು, ಇನ್ನೊಂದು ವಾರದಲ್ಲಿ ಉತ್ತರ ಕರ್ನಾಟಕದ 17 ಚಿತ್ರಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಚಿತ್ರ ನಿರ್ದೇಶಕ ಕೆ.ಎಂ. ಚೈತನ್ಯ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಕರನ್ನು ಕೇಂದ್ರೀಕರಿಸಿ ಈ ಚಿತ್ರ ನಿರ್ಮಿಸಲಾಗಿದ್ದು, ಚಿತ್ರದುದ್ದಕ್ಕೂ ಹಾಸ್ಯದ ಹೊನಲು ಹರಿದಿದೆ. ಉತ್ತರ ಕರ್ನಾಟಕದಲ್ಲಿ ಚಿತ್ರ ನಿರ್ಮಾಣ ನಡೆದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕಥೆಗೆ ಸೂಕ್ತವಾಗಿರುವ ಸ್ಥಳದಲ್ಲಿ ಚಿತ್ರ ನಿರ್ಮಿಸಬೇಕಾಗುತ್ತದೆ. ಒಂದು ವೇಳೆ ಉತ್ತರ ಕರ್ನಾಟಕದ ಪರಿಸರಕ್ಕೆ ಹೊಂದಿಕೊಳ್ಳುವಂತಹ ಚಿತ್ರಕಥೆ ದೊರೆತಲ್ಲಿ ಖಂಡಿತವಾಗಿ ಉತ್ತರ ಕರ್ನಾಟಕದ ಭಾಗದಲ್ಲಿ ಚಿತ್ರೀಕರಣ ಮಾಡಲಾಗುವುದು ಎಂದು ಹೇಳಿದರು.
ಚಿತ್ರದ ನಾಯಕಿ ಶುಭಾ ಪೂಂಜಾ ಮಾತನಾಡಿ, ಪರಾರಿ ಯುವ, ಪಡ್ಡೆ ಹುಡುಗರನ್ನು ಗಮನದಲ್ಲಿರಿಸಿಕೊಂಡು ನಿರ್ಮಿಸಿದ್ದರೂ ಕೆಲವೊಂದು ಸ್ಥಳಗಳಲ್ಲಿ ಇಡೀ ಕುಟುಂಬದ ಸದಸ್ಯರು ವೀಕ್ಷಿಸುತ್ತಿದ್ದಾರೆ ಎಂದು ಹೇಳಿದರು.
ಮೊಗ್ಗಿನ ಮನಸ್ಸು ಚಿತ್ರದಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದ ನನಗೆ ಪರಾರಿ ಚಿತ್ರದಲ್ಲಿನ ಉರ್ಮಿಳೆ ಪಾತ್ರ ವಿಭಿನ್ನ ಎನ್ನುವುದು ಅನುಭವಕ್ಕೆ ಬಂದಿದೆ. ಟಿವಿ ಸಿರಿಯಲ್‌ನ ನಾಯಕಿ ಉರ್ಮಿಳೆಯಾಗಿ ನಟಿಸುತ್ತಿರುವುದು ಇದೇ ಮೊದಲ ಬಾರಿ, ಅಗತ್ಯಕ್ಕೆ ತಕ್ಕಂತೆ ಉರ್ಮಿಳೆ ಪಾತ್ರದಲ್ಲಿ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದೇನೆ ಎಂದರು.
ಪರಾರಿ ಚಿತ್ರದ ಮೂಲಕ ಕನ್ನಡ ಚಲನಚಿತ್ರ ರಂಗ ಪ್ರವೇಶಿಸಿರುವ ನಟ ಶೃಂಗ, ರಂಗಶಂಕರ ಸೇರಿದಂತೆ ವಿವಿಧ ಹವ್ಯಾಸಿ ನಾಟಕ ತಂಡಗಳಲ್ಲಿ ರಂಗಭೂಮಿಯೊಂದಿಗೆ ನಂಟು ಬೆಳೆಸಿಕೊಂಡಿದ್ದೇನೆ. ರಂಗ ಶಂಕರದ ಬಾಲಿವುಡ್ ಸೂಟ್‌ಕೇಸ್ ಎನ್ನುವ ಮಕ್ಕಳ ನಾಟಕದಲ್ಲಿ ಇತ್ತೀಚೆಗೆ ಅಭಿನಯಿಸಿದ್ದೇನೆ. ಪ್ರಪ್ರಥಮವಾಗಿ ಬೆಳ್ಳಿತೆರೆಗೆ ಮೇಲೆ ಪರಾರಿ ಮೂಲಕ ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.