ಧಾರವಾಡ

ಸುದ್ದಿ ಸಂಕ್ಷೇಪ

Published On :

ಇಂದು ಕಾರ್ಯಾಗಾರ
ಕಲಘಟಗಿ: ಜಿಲ್ಲಾ ಮಾನವ ಅಭಿವೃದ್ಧಿ ವರದಿ ತಯಾರಿಕೆ ಕುರಿತು ಅರಿವು ಮೂಡಿಸಲು ಮೇ 18ರಂದು ತಾಲೂಕು ಮಟ್ಟದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಅಂದು ಮುಂಜಾನೆ 11 ಗಂಟೆಗೆ ಇಲ್ಲಿನ ತಾಪಂ ಸಭಾ ಭವನದಲ್ಲಿ ಜರುಗುವ ಈ ಕಾರ್ಯಾಗಾರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಸಂಸ್ಥೆ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಪಾಲ್ಗೊಳ್ಳಬೇಕೆಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಎಸ್.ಆರ್. ವೀರಕರ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಗಾಯನ ಕಾರ್ಯಕ್ರಮ
ಧಾರವಾಡ: ಭಾರತೀಯ ಸಂಗೀತ ವಿದ್ಯಾಲಯ ಪಂಡಿತ ಜಿತೇಂದ್ರ ಅಭಿಶೇಕಿ ಅವರ ಸ್ಮರರ್ಣಾರ್ಥ ಇಲ್ಲಿನ ಸೃಜನಾ ರಂಗಮಂದಿರದಲ್ಲಿ ಮೇ 19ರಂದು ಸಂಜೆ 6ಕ್ಕೆ ಪಂಡಿತರ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಂಬೈನ ಖ್ಯಾತ ಗಾಯಕಿ ದೇವಕಿ ಅವರು ಹಾಡಲಿದ್ದಾರೆ. ಸುಧಾಂಶು ಕುಲಕರ್ಣಿ ಹಾರ್ಮೋನಿಯಂ, ಪ್ರಶಾಂತ ಪಾಂಡವ ತಬಲಾ ಸಾಥ ನೀಡಲಿದ್ದಾರೆ ಎಂದು ರಾಘವೇಂದ್ರ ಆಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಧ್ಯಯನ ಪ್ರವಾಸ
ಧಾರವಾಡ: ಇಲ್ಲಿನ ಸಹಾಯಕ ತೋಟಗಾರಿಕಾ ಅಧಿಕಾರಿ ಸಂಗಮೇಶ ಗೋಲಪ್ಪನವರ ತೋಟಗಾರಿಕೆ ಇಲಾಖೆ ವತಿಯಿಂದ ಹೆಚ್ಚಿನ ಅಧ್ಯಯನಕ್ಕಾಗಿ ಮೇ 20ರಂದು ಇಲಾಖೆಯ ಅಧಿಕಾರಿಗಳು ಹಾಗೂ ರೈತರ ನಿಯೋಗದೊಂದಿದೆ ಇಸ್ರೆಲ್ ದೇಶಕ್ಕೆ ತೆರಳಲಿದ್ದಾರೆ. ಒಂದು ವಾರದ ಪ್ರವಾಸದಲ್ಲಿ ನಿಯೋಗದ ಸದಸ್ಯರು ತೋಟಗಾರಿಕೆ ಕ್ಷೇತ್ರದಲ್ಲಿನ ಸಂಶೋಧನೆ, ನೂತನ ತಾಂತ್ರಿಕತೆ ಅಧ್ಯಯನ, ತರಬೇತಿ ಕೇಂದ್ರಗಳು ಮತ್ತು ಪ್ರಗತಿಪರ ರೈತರ ಪ್ರಾತ್ಯಕ್ಷಿಕೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಅರ್ಜಿ ಆಹ್ವಾನ
ಧಾರವಾಡ:  ಆರ್ಥಿಕ ಸಂಕಷ್ಟದಲ್ಲಿರುವ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಧಾರವಾಡದ ವಿದ್ಯಾಪೋಷಕ ಸಂಸ್ಥೆ ನರ್ಚರ್ ಮೆರಿಟ್ ಯೋಜನೆಯಡಿಯಲ್ಲಿ ಪ್ರಸ್ತಕ ಸಾಲಿಗಾಗಿ ಧನ ಸಹಾಯವನ್ನು ನೀಡಲು ಮುಂದಾಗಿದ್ದು, ಉಚಿತ ಆನ್‌ಲೈನ್ ಅರ್ಜಿ ಸಲ್ಲಿಸಲು ನಿಗದಿ ದಿನವನ್ನು ವಿಸ್ತರಸಲಾಯಿತು.
ದಲ್ಲಿ ಉಚಿತವಾಗಿ ಅರ್ಜಿ ಲಭ್ಯವಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ 0836-2747357 ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.