ಧಾರವಾಡ

ಬಿಜೆಪಿ ಭದ್ರಕೋಟೆ ಛಿದ್ರ: ವೇದವ್ಯಾಸ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಮೇ 17
ಜಿಲ್ಲೆಯಲ್ಲಿನ ಬಿಜೆಪಿ ಭದ್ರಕೋಟೆ ಛಿದ್ರವಾಗಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಹು-ಧಾ ಸೆಂಟ್ರಲ್ ಕ್ಷೇತ್ರದಿಂದ ಜಯ ಸಾಧಿಸುವುದಕ್ಕೆ ಅವರು ಹಣದ ಹೊಳೆ ಹರಿಸಿದ್ದು ಮತ್ತು ಅಧಿಕಾರ ದುರುಪಯೋಗ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ವೇದವ್ಯಾಸ ಕೌಲಗಿ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ. ಮಹೇಶ ನಾಲವಾಡ ಅವರು ಇನ್ನಷ್ಟು ಪ್ರಯತ್ನ ಮಾಡಿ ಬ್ರಾಹ್ಮಣ, ಕುರುಬ ಮತ್ತು ಲಿಂಗಾಯತ ಸಮಾಜಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಅವರ ಸೋಲಿನ ಅಂತರ ಇನ್ನಷ್ಟು ಕಡಿಮೆಯಾಗುತ್ತಿತ್ತು. ಒಟ್ಟಿನಲ್ಲಿ ಡಾ. ಮಹೇಶ ನಾಲವಾಡ ಚುನಾವಣೆ ವೇಳೆ ಇನ್ನಷ್ಟು ಕ್ರೀಯಾಶೀಲರಾಗಿದ್ದರೆ ಕಾಂಗ್ರೆಸ್‌ಗೆ ಇನ್ನಷ್ಟು ಮತಗಳು ಬರುತ್ತಿದ್ದವು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಶುದ್ಧ ಹಸ್ತರಿಗೆ ಮಾತ್ರ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಿದ್ದಾರೆ ಎನ್ನುವ ವಿಶ್ವಾಸವಿದೆ. ವಿಧಾನಪರಿಷತ್ ಮಾಜಿ ಸದಸ್ಯ ವೀರಣ್ಣ ಮತ್ತಿಕಟ್ಟಿ ಅವರಿಗೆ ಸಚಿವ ಸ್ಥಾನ ನೀಡುವುದು ಬಿಡುವುದು ಸಿದ್ದರಾಮಯ್ಯ ಅವರಿಗೆ ಬಿಟ್ಟ ಸಂಗತಿ ಎಂದು ಹಾರಿಕೆ ಉತ್ತರ ನೀಡಿದರು.
ಮಹಾನಗರ ಪಾಲಿಕೆ ಆಡಳಿತವನ್ನು ತೆಕ್ಕೆಗೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ವಿಚಾರ ಮಾಡಲಿದ್ದಾರೆ. ಈಗಾಗಲೇ ಆ ನಿಟ್ಟಿನಲ್ಲಿ ಏನೂ ಹೇಳಲು ಸಾಧ್ಯವಿಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ನೀಲಕಂಠ ಅಸೂಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.