25ರಂದು ಹೋಮ
ಧಾರವಾಡ: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣಕ್ಕಾಗಿ ವಿಜಯ ಮಹಾಮಂತ್ರ ಜಪಾನುಷ್ಠಾನ ಸಮಿತಿ 13 ಕೋಟಿ ಜಪದ ಸಾಂಗತಾ ಹೋಮದ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಂಡಿದ್ದು, ಇದರಂಗವಾಗಿ ಇಲ್ಲಿನ ವಿಶ್ವ ಹಿಂದು ಪರಿಷದ್ ಮೇ 25ರಂದು ಧಾರವಾಡದ ಸಪ್ತಾಪುರ ಹನುಮಂತ ದೇವರ ದೇವಸ್ಥಾನದಲ್ಲಿ ಸಂಗತಾ ಹೋಮ ಏರ್ಪಡಿಸಿದೆ. ಶ್ರೀರಾಮನ ಭಕ್ತರು ಅಂದು ಸಹ ಕುಟುಂಬದಿಂದ ಬಂದು ತನು-ಮನ-ಧನಗಳಿಂದ ಸೇವೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ-ಕುಶೇಂದ್ರ ಪ್ರಭು-99863 39646 ಸಂಪರ್ಕಿಸಬಹುದು ಎಂದು ಪರಿಷದ್ನ ಸಹ ಕಾರ್ಯದರ್ಶಿ ರಾಘವೇಂದ್ರ ಕುಲಕರ್ಣಿ ತಿಳಿಸಿದ್ದಾರೆ.
ಸ್ಥಿರಾಸ್ತಿಗಳ ದರ ಪರಿಷ್ಕರಣೆ
ಧಾರವಾಡ: ಧಾರವಾಡ ಉಪ ನೋಂದಣಿ ಕಚೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ದರಗಳನ್ನು ಪರಿಷ್ಕರಿಸಿದ್ದು, ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಈ ಕುರಿತು ಏನಾದರೂ ತಕರಾರುಗಳಿದ್ದರೆ ಮೇ 25ರ ಒಳಗಾಗಿ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಉಪ ನೋಂದಣಾಧಿಕಾರಿಗಳು, ಧಾರವಾಡ ಇವರಿಗೆ ಲಿಖಿತ ರೂಪದಲ್ಲಿ ನೀಡಲು ತಿಳಿಸಲಾಗಿದೆ.
ಕಳ್ಳತನಕ್ಕೆ ಯತ್ನ: ದೂರು
ಹುಬ್ಬಳ್ಳಿ: ಹುಬ್ಬಳ್ಳಿಯ ಬಾದಾಮಿ ನಗರದಲ್ಲಿರುವ ಅಡೋನಿಸ್ ಎಲೆಕ್ಟ್ರಾನಿಕ್ಸ್ ಓನಿಡಾ ಕಂಪನಿಯ ಬಾಗಿಲು ಮುರಿದು ಕಳ್ಳತನ ಮಾಡಲಾಗಿದೆ ಎಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಓನಿಡಾ ಕಂಪನಿಯ ಬಾಗಿಲಿಗೆ ಹಾಕಿದ್ದ ಬೀಗವನ್ನು ಮುರಿದು ಕಳ್ಳತನಕ್ಕೆ ಯತ್ನಿಸಿದ್ದು, ಆದರೆ ಕಳುವಾಗಿರುವ ಸಾಮಗ್ರಿಗಳ ಕುರಿತು ನಿಖರ ಮಾಹಿತಿ ದೊರೆತಿಲ್ಲ ಎಂದು ಓನಿಡಾ ಕಂಪನಿ ವ್ಯವಸ್ಥಾಪಕ ಓಂಕಾರ ಅಥಣಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

