ಧಾರವಾಡ

ಪರಿಸರಕ್ಕಾಗಿ ಜೂ. 5ರಂದು ಸತ್ಯಾಗ್ರಹ

Published On :

ಧಾರವಾಡ:  ಹು-ಧಾ ಬಿಆರ್‌ಟಿಎಸ್ ಪರಿಸರ ಸಂರಕ್ಷಣ ಸಮಿತಿ ವತಿಯಿಂದ ರಾಯಾಪುರದ ಬಿಆರ್‌ಟಿಎಸ್ ಕಚೇರಿ ಎದುರು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ. 5ರಂದು ಒಂದು ದಿನದ ಸಾಂಕೇತಿಕ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಸಮಿತಿಯ ಸಂಚಾಲಕ ಆರ್.ಪಿ. ಪಾಟೀಲ ಕುಲಕರ್ಣಿ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಳಿ ನಗರಗಳ ಮಧ್ಯೆ ಚತುಷ್ಪಥ ರಸ್ತೆ ಮಾಡುವ ಯೋಜನೆಯನ್ನು ಬಿಆರ್‌ಟಿಎಸ್ ಯೋಜನೆಯಡಿ ಕೈಗೊಳ್ಳಲಾಗಿದ್ದು, ಅದಕ್ಕಾಗಿ ಸುಮಾರು ಎರಡು ಸಾವಿರ ಮರಗಳನ್ನು ಕಡಿಯಲಾಗಿದೆ. ಆದರೆ, ಈ ಯೋಜನೆ ನಕ್ಷೆಯಲ್ಲಿ ರಸ್ತೆಯ ಪಕ್ಕದಲ್ಲಿ ಗಿಡಗಳನ್ನು ನೆಡುವ ಯಾವುದೇ ರೀತಿಯ ಜಾಗೆಯನ್ನು ಕಾಯ್ದಿರಿಸಿಲ್ಲ. ಈ ಕುರಿತು ಹಿಂದಿನ ಜಿಲ್ಲಾಧಿಕಾರಿಗಳಿಗೆ ಪ್ರಶ್ನಿಸಲಾಗಿದ್ದು, ರಸ್ತೆಯನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿದ್ದರು. ಆದರೆ, ಯೋಜನೆಯಲ್ಲಿ ಈ ವಿಚಾರ ಇಲ್ಲ. ಪ್ರಸ್ತುತ ರಸ್ತೆ ಅಗಲೀಕರಣ ಮಾಡುತ್ತಿದ್ದು, ಅವುಗಳಲ್ಲಿ ಯಾವುದೇ ರೀತಿಯ ಸರಿಯಾದ ಮಾಹಿತಿ ಇಲ್ಲದಂತಾಗಿದೆ. ಅಲ್ಲದೇ ಗಿಡಗಳನ್ನು ನೆಡುವುದರಿಂದ ಪರಿಸರದಲ್ಲಿಯ ವೈಪರಿತ್ಯವನ್ನು ತಡೆಯಬಹುದಾಗಿದೆ. ಆದರೆ, ಜಿಲ್ಲೆಯಲ್ಲಿ ಮಾತ್ರ ಈ ಕುರಿತು ಯಾವುದೇ ರೀತಿಯ ಮುಂಜಾಗೃತೆ ಕ್ರಮವನ್ನು ಕೈಗೊಳ್ಳಲಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ಅವಳಿ ನಗರದ ಮಧ್ಯದಲ್ಲಿಯ ಎರಡು ಕೆರೆಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದ್ದು, ಈ ಕುರಿತು ಸಹ ಮುಖ್ಯ ನಕ್ಷೆಯಲ್ಲಿ ಯಾವುದೇ ರೀತಿಯ ಮಾಹಿತಿ ಇಲ್ಲ. ಜಲಸಂಪನ್ಮೂಲಗಳನ್ನೇ ನಾಶಪಡಿಸಿದರೆ ಗಿಡಗಳನ್ನು ಯಾವ ರೀತಿ ಸಂರಕ್ಷಣೆ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಾಟೀಲ ಕುಲಕರ್ಣಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.