25ರಿಂದ 4ನೇ ಶರಣೋತ್ಸವ
ಧಾರವಾಡ: ಇಲ್ಲಿನ ಹಳಿಯಾಳ ರಸ್ತೆಯಲ್ಲಿರುವ ಅಕ್ಕಮಹಾದೇವಿ ಆಶ್ರಮ ಟ್ರಸ್ಟ್ ಹಾಗೂ ರಾಷ್ಟ್ರೀಯ ಬಸವದಳ ವತಿಯಿಂದ ಮೇ 25ರಿಂದ 27ರವರೆಗೆ ಬಸವ ಧರ್ಮದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರ ಸಾನ್ನಿಧ್ಯದಲ್ಲಿ 4ನೇ ಶರಣೋತ್ಸವ ಆಚರಿಸಲಾಗುತ್ತಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶರಣೋತ್ಸವ ಸಮಿತಿ ಪ್ರಧಾನ ಸಂಘಟಕ ಶ್ರೀ ಚನ್ನಬಸವಾನಂದ ಸ್ವಾಮೀಜಿ, ನಗರದ ಅಕ್ಕಮಹಾದೇವಿ ಮಠದಲ್ಲಿ ಶರಣೋತ್ಸವ ನಡೆಯಲಿದ್ದು, 25ರ ಮುಂಜಾನೆ 10.30ಕ್ಕೆ ಅಕ್ಕಮಹಾದೇವಿ ಅನುಭಾವ ಪೀಠಾಧ್ಯಕ್ಷೆ ಗಂಗಾದೇವಿ ಮಾತಾಜಿ ಧ್ವಜಾರೋಹಣ ನೆರವೇರಿಸುತ್ತಾರೆ. ಕೃಷಿ ವಿವಿ ಕುಲಸಚಿವ ಎಚ್.ಎಸ್. ವಿಜಯಕುಮಾರ ಉದ್ಘಾಟಿಸಲಿದ್ದಾರೆ. ಸಂಜೆ ನಡೆಯುವ ಮಹಿಳಾ ಗೋಷ್ಠಿಗೆ ಪಾಲಿಕೆ ಸದಸ್ಯರಾದ ಶೈಲಾ ಕಾಮರೆಡ್ಡಿ ಚಾಲನೆ ನೀಡಲಿದ್ದಾರೆ ಎಂದರು.
26ರಂದು ಮುಂಜಾನೆ ಮಾತೆ ಮಹಾದೇವಿಯರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಸಚಿವ ಸಂತೋಷ್ ಲಾಡ್ ಉದ್ಘಾಟಿಸಲಿದ್ದಾರೆ. ನಿಷ್ಕಲ ಮಂಟಪದ ಶ್ರೀ ನಿಜಗುಣಾನಂದ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಶಾಸಕರಾದ ವಿನಯ ಕುಲಕರ್ಣಿ ಮತ್ತು ಅರವಿಂದ ಬೆಲ್ಲದ ಅತಿಥಿಗಳಾಗಿ ಆಗಮಿಸಲಿದ್ದಾರೆ. 27ರ ಮುಂಜಾನೆ ಮಾತೆ ಗಂಗಾದೇವಿ ಅವರ ಪೀಠಾರೋಹಣ ನಡೆಯಲಿದ್ದು, ಜಿಲ್ಲಾಧಿಕಾರಿ ಸಮೀರ ಶುಕ್ಲ ಬಸವ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕವಿವಿ ಕುಲಸಚಿವ ಡಾ.ಜಿ.ಬಿ. ನಂದನ ಅತಿಥಿಗಳಾಗಿ ಆಗಮಿಸಲಿದ್ದು, ಮಾತೆ ಸತ್ಯಾದೇವಿ, ಮಾತೆ ಜ್ಞಾನೇಶ್ವರಿ, ಮಾತೆ ಸಿದ್ದೇಶ್ವರಿ ಸಮ್ಮುಖ ವಹಿಸಲಿದ್ದಾರೆ. ಅಲ್ಲದೆ, ಸಂಜೆ 4.30ಕ್ಕೆ ವಿಶ್ವಗುರು ಬಸವಣ್ಣನವರ, ಶ್ರೀ ಅಕ್ಕಮಹಾದೇವಿ ಹಾಗೂ ಪೀಠಾಧ್ಯಕ್ಷರ ಮೆರವಣಿಗೆ ನಗರದ ಕಲಾಭವನದಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದ್ದು, ವಿವಿಧ ಜಿಲ್ಲೆಗಳಿಂದ ಎಂಟು ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ ಎಂದು ಸ್ವಾಮೀಜಿ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಸಿದ್ದಣ್ಣ ನಟೆಗಲ್, ಕರಿಬಸಪ್ಪ ಕೋರಿಶೆಟ್ಟರ, ದೇವೇಂದ್ರಪ್ಪ ಇಂಗಳಹಳ್ಳಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

