ಧಾರವಾಡ

ಅಕ್ರಮಗಳ ನಿಯಂತ್ರಣಕ್ಕೆ ಮನೋವಿಜ್ಞಾನಿ ಅಗತ್ಯ

Published On :

ಧಾರವಾಡ: ಸಮಾಜದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಸಮಾಜದಲ್ಲಿ ಭ್ರಷ್ಟಾಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇವುಗಳನ್ನು ನಿಯಂತ್ರಿಸುವಲ್ಲಿ ಮನೋವಿಜ್ಞಾನಿಗಳು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿರುಪತಿ ವಿಶ್ವವಿದ್ಯಾಲಯದ ಮನೋವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ. ಬಸವಣ್ಣ ಹೇಳಿದರು.
ಕರ್ನಾಟಕ ವಿಶ್ವವಿದ್ಯಾಲಯದ ಮನೋವಿಜ್ಞಾನ ವಿಭಾಗದ ವತಿಯಿಂದ ಕವಿವಿ ಅಮೃತ ಮಹೋತ್ಸವ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿರುವ ಎರಡು ದಿನ ಇಂಡಿಯನ್ ಅಕಾಡೆಮಿ ಆಫ್ ಅಪ್ಲೈಡ್ ಸೈಕಾಲಜಿ ಸಂಸ್ಥೆಯ 48ನೇ ರಾಷ್ಟ್ರೀಯ ಹಾಗೂ 17ನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಅವರು, ಸಮಾಜವನ್ನು ಸರಿದಾರಿಗೆ ತರುವಲ್ಲಿ ಮನೋವಿಜ್ಞಾನಿಗಳ ಪಾತ್ರವು ಪ್ರಮುಖ. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ಉತ್ತಮ ಮನೋವಿಜ್ಞಾನಿಗಳನ್ನು ತಯಾರು ಮಾಡುವಲ್ಲಿ ಪ್ರಯತ್ನಿಸಬೇಕೆಂದು ಹೇಳಿದರು.
ಭಾರತ ಸೇರಿದಂತೆ ಎಲ್ಲ ದೇಶಗಳಲ್ಲಿ ಬೆಳಗಾಗುವುದರೊಳಗಾಗಿ ಶ್ರೀಮಂತರಾಗಬೇಕೆಂಬ ಆಶಯ ಇದೆ. ಇದಕ್ಕಾಗಿ ಹಲವು ಅಕ್ರಮ ಮಾಡುತ್ತಾರೆ. ಆದರೆ, ಪ್ರಾಮಾಣಿಕರು ದಿಢೀರ್ ಶ್ರೀಮಂತರಾಗಲು ಸಾಧ್ಯವಿಲ್ಲ ಎಂದರು. ಜಗತ್ತಿನಾದ್ಯಂತ ನೂರಾರು ಮನೋವಿಜ್ಞಾನಿಗಳಿದ್ದರೂ ಮನೋವಿಜ್ಞಾನ ಸಂಬಂಧಿ ಲೇಖನಗಳು ನಿರೀಕ್ಷಿತ ಮಟ್ಟದಲ್ಲಿ ಬರುತ್ತಿಲ್ಲ. ವಿಶ್ವದಾದ್ಯಂತ ಒಟ್ಟು ಐದು ಲಕ್ಷ ಮನೋವಿಜ್ಞಾನಿಗಳಿದ್ದು, ಅಮೆರಿಕವೊಂದರಲ್ಲೇ ಮೂರು ಲಕ್ಷ, ಉಳಿದ ಎರಡು ಲಕ್ಷ ಜನರು ಯೂರೋಪ್, ಏಷ್ಯಾ ಸೇರಿದಂತೆ ವಿವಿಧ ಖಂಡಗಳಲ್ಲಿದ್ದಾರೆ. ಅದರಲ್ಲಿ ಅರ್ಧದಷ್ಟು ಮಹಿಳೆಯರು ಇದ್ದಾರೆ. ಆದರೆ, ಅಂತಾರಾಷ್ಟ್ರೀಯ ಜರ್ನಲ್ಗಳಲ್ಲಿ ಮಾತ್ರ ಮನೋವಿಜ್ಞಾನಕ್ಕೆ ಸಂಬಂಧಿಸಿದಂತೆ ತೃಪ್ತಿಡುವಷ್ಟು ಲೇಖನಗಳು ಪ್ರಕಟವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಮನೋವಿಜ್ಞಾನಿಗಳು ಚಿಂತನೆ ನಡೆಸಬೇಕು ಎಂದು ಪ್ರೊ. ಎಂ. ಬಸವಣ್ಣ ಆಶಯ ವ್ಯಕ್ತಪಡಿಸಿದರು.
ಐಎಎಪಿ ಅಧ್ಯಕ್ಷ ಪ್ರೊ. ರವಿ ಗಂತೆ ಅಧ್ಯಕ್ಷತೆ ವಹಿಸಿದ್ದರು. ಕವಿವಿ ಕುಲಪತಿ ಡಾ. ಎಚ್.ಬಿ. ವಾಲೀಕಾರ, ಕವಿವಿ ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಪ್ರೊ. ವಿಜಯಲಕ್ಷ್ಮಿ ಅಮ್ಮಿನಭಾವಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.