ಜಿಲ್ಲೆಯಲ್ಲಿ 6ನೇ ಆರ್ಥಿಕ ಗಣತಿ
ಧಾರವಾಡ: ರಾಜ್ಯಾದ್ಯಂತ ಜೂನ್ 1ರಿಂದ 30ರ ವರೆಗೆ 6ನೇ ಆರ್ಥಿಕ ಗಣತಿ ಕಾರ್ಯ ನಡೆಯಲಿದೆ. ಜಿಲ್ಲೆಯಲ್ಲಿ ಇದಕ್ಕಾಗಿ ನಿಯುಕ್ತಿಗೊಂಡ ಅಧಿಕಾರಿಗಳು ಜವಾಬ್ದಾರಿಯಿಂದ ಹೊಣೆಗಾರಿಕೆ ನಿರ್ವಹಿಸಲು ಜಿಲ್ಲಾಧಿಕಾರಿ ಸಮೀರ್ ಶುಕ್ಲ ಸೂಚಿಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ನಡೆದ 6ನೇ ಆರ್ಥಿಕ ಗಣತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಆಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಆರ್ಥಿಕ ಗಣತಿಯಡಿ, ಕೃಷಿ, ಕೃಷಿಯೇತರ, ಸಂಘಟಿತ, ಅಸಂಘಟಿತ ಕಾರ್ಮಿಕರ ಹಾಗೂ ಉದ್ದಿಮೆಗಳಲ್ಲಿರುವವರ ಮನೆಮನೆಗೆ ಗಣತಿದಾರರು ಭೇಟಿ ನೀಡಿ ಎಣಿಕೆ ಕಾರ್ಯ ಮಾಡಲಿದ್ದು, ಈ ಸಂದರ್ಭದಲ್ಲಿ ಅವರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲ ಪೊಲೀಸ್ ಠಾಣೆಗಳಲ್ಲಿ ಗಣತಿ ಕಾರ್ಯದ ಕುರಿತು ಪೂರ್ವ ಸೂಚನೆ ನೀಡಲು ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವೈ.ಎಸ್. ರವಿಕುಮಾರ ಅವರಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು. 2011ರ ಜನಗಣತಿ ಬ್ಲಾಕುಗಳನ್ನು ಆರ್ಥಿಕ ಗಣತಿಯಲ್ಲಿ ಕೂಡಾ ಉಪಯೋಗಿಸಲಾಗುತ್ತಿದೆ. ಈ ಕುರಿತಂತೆ ಅವಶ್ಯಕ ಎಲ್ಲ ಮಾಹಿತಿ ಹಾಗೂ ಪೂರ್ವಸಿದ್ಧತೆ ಕೈಗೊಳ್ಳಲಾಗಿದೆ. ಗಣತಿದಾರರ ನೇಮಕಾತಿಗಾಗಿ ಕಿಯೋನಿಕ್ಸ್ ಸಂಸ್ಥೆಯ ಮೂಲಕ ನೇಮಕಾತಿಸಲಾದ ಅಂಕಿ ಸಂಖ್ಯಾ ಇಲಾಖೆ ಸಿದ್ಧಪಡಿಸಿದ ಪಟ್ಟಿಯನ್ನು ಉಪಯೋಗಿಸಿಕೊಂಡು ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಮೇಲ್ವಿಚಾರಕರನ್ನು ನೇಮಕ ಮಾಡಲು ಡಿಸಿ ಸೂಚಿಸಿದರು. ಜಿಲ್ಲೆಯಲ್ಲಿನ ಆರ್ಥಿಕ ಗಣತಿ ಕಾರ್ಯಕ್ಕಾಗಿ ಹನ್ನೆರಡು ಜನ ಸಂಪನ್ಮೂಲ ವ್ಯಕ್ತಿಗಳನ್ನು ನಿಯಮಿಸಲು ಸಹ ಸಭೆಯಲ್ಲಿ ನಿರ್ಧರಿಸಲಾಯಿತು. ಪಾಲಿಕೆ ಆಯುಕ್ತ ವೈ.ಎಸ್. ಪಾಟೀಲ, ಉಪವಿಭಾಗಾಧಿಕಾರಿ ಮಹಾಂತೇಶ ಕರ್ಜಗಿ, ಸಮನ್ವಯ ಸಮಿತಿ ಸದಸ್ಯ ಕಾರ್ಯದರ್ಶಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎನ್.ಎಸ್. ನಾಗಶೆಟ್ಟಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

