ಬಿಜೆಪಿಯ ಯೋಜನೆಗಳಿಗೆ ಕಾಂಗ್ರೆಸ್‌ನಿಂದ ಕಲ್ಲು: ಶೆಟ್ಟರ್
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಮೇ 26
ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಯಾಗಿರುವ ಜನಪರ ಯೋಜನೆಗಳಿಗೆ ಕಲ್ಲು ಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದ್ದು, ಸೇಡಿನ ರಾಜಕಾರಣ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಭಾನುವಾರ ಹುಬ್ಬಳ್ಳಿ ಮಹಾನಗರ ಬಿಜೆಪಿ ಜಿಲ್ಲಾ ಘಟಕ ಆಯೋಜಿಸಿದ್ದ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಆಶ್ರಯ ಯೋಜನೆಯಡಿ ಫಲಾನುಭವಿಗಳಿಗೆ ನೀಡಲಾಗುತ್ತಿರುವ ಸಹಾಯಧನವನ್ನು 1.20 ಲಕ್ಷ ಗಳಿಗೆ ಹೆಚ್ಚಿಸಿರುವ ಸಿಎಂ ಸಿದ್ದರಾಮಯ್ಯ, ಈಗಾಗಲೇ ಈ ಯೋಜನೆಯಡಿ ಆಯ್ಕೆಯಾದ ರಾಜ್ಯದ 3 ಲಕ್ಷ ಫಲಾನುಭವಿಗಳಿಗೂ ಈ ಯೋಜನೆ ಅನ್ವಯವಾಗುತ್ತದೆಯೇ ಎನ್ನುವುದಕ್ಕೆ ಮೊದಲು ಉತ್ತರಿಸಲಿ ಎಂದರು.
ಹು-ಧಾ ಅವಳಿ ನಗರಕ್ಕೆ ಬಿಜೆಪಿ ಆಡಳಿತಾವಧಿಯಲ್ಲಿ ಬಂದಿರುವ ಒಟ್ಟು ಅನುದಾನದ ಪೈಕಿ ಶೇ. 10ರಷ್ಟನ್ನು ತರುವುದಕ್ಕೆ ಆಯ್ಕೆಯಾದ ಕಾಂಗ್ರೆಸ್ ಶಾಸಕರಿಂದ ಆಗುವುದಿಲ್ಲ ಎಂದು ಹೇಳಿದ ಶೆಟ್ಟರ್, ರಾಜ್ಯದಲ್ಲಿ ಅಧಿಕಾರಕ್ಕೆ ಏರಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ಜೆನರ್ಮ್ ಯೋಜನೆಗೆ ಅವಳಿ ನಗರ ಆಯ್ಕೆಯಾಗುವಂತೆ ಕೇಂದ್ರದ ಮೇಲೆ ಒತ್ತಡ ತರುವ ಕೆಲಸ ಮಾಡಲಿ ಎಂದು ಸವಾಲು ಹಾಕಿದರು.
ಅವಳಿ ನಗರದ ಯೋಜನೆಗಳಿಗೂ ಕಲ್ಲು: ಹು-ಧಾ ಅವಳಿ ನಗರದ ಮಧ್ಯೆ ಸುಗಮ ಸಂಚಾರಕ್ಕಾಗಿ ಜಾರಿಗೆ ತರಲಾಗಿರುವ ಬಿಆರ್‌ಟಿಎಸ್ ಮತ್ತು ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆಗೂ ಸಿದ್ದರಾಮಯ್ಯ ಅನುದಾನ ಬಿಡುಗಡೆ ಮಾಡುವುದಿಲ್ಲ ಎಂದು ಹೇಳುತ್ತಿರುವುದರಿಂದ ಇನ್ನೈದು ವರ್ಷಗಳ ವರೆಗೆ ಅವಳಿ ನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕೆಲಸ ನನೆಗುದಿಗೆ ಬೀಳಲಿದೆ ಎಂದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಅಗ್ಗದ ಮದ್ಯ ಮಾರಾಟಕ್ಕೆ ಅನುಕೂಲ ಕಲ್ಪಿಸುವ ಕುರಿತು ಹೇಳಿಕೆ ನೀಡಿ, ನಾಡಿನ ಜನರನ್ನು ಸಾಮಾಜಿಕವಾಗಿ ಮತ್ತು ಕೌಟುಂಬಿಕವಾಗಿ ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದರು. ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ಪ್ರಹ್ಲಾದ ಜೋಶಿ, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಮತದಾರನಿಗೆ ಕಾಂಗ್ರೆಸ್ ಮೇಲೆ ಪ್ರೀತಿ ಉಕ್ಕಿ ಹರಿದು ಮತ ಹಾಕಿಲ್ಲ. ನಮ್ಮ ತಪ್ಪುಗಳು, ಅಧಿಕಾರಕ್ಕಾಗಿ ನಮ್ಮ ಪಕ್ಷದಲ್ಲಿ ನಡೆದ ಕಚ್ಚಾಟದಿಂದ ಬೇಸತ್ತು ಮತದಾರ ಕಾಂಗ್ರೆಸ್ ಕೈ ಹಿಡಿದಿದ್ದಾನೆ ವಿನಃ ಕಾಂಗ್ರೆಸ್ ಒಳ್ಳೆಯ ಕೆಲಸ ಮಾಡಿದೆ ಎಂದು ಅಲ್ಲ ಎಂದು ಹೇಳಿದರು. ಮಾಜಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಧೆ ಅಧ್ಯಕ್ಷ ಮಲ್ಲಿಕಾರ್ಜುನ ಸಾವಕಾರ್ ಪ್ರಾಸ್ತಾವಿಕ ಮಾತನಾಡಿದರು. ವೇದಿಕೆಯಲ್ಲಿ ಶಾಸಕ ಅರವಿಂದ ಬೆಲ್ಲದ್, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮಾಜಿ ಮೇಯರ್ ಡಾ. ಪಾಂಡುರಂಗ ಪಾಟೀಲ, ಲಿಂಗರಾಜ ಪಾಟೀಲ, ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ್, ರಂಗಾ ಬದ್ದಿ, ನಾಗೇಶ ಕಲ್ಬುರ್ಗಿ, ಬಾಳು ಮಗಜಿಕೊಂಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

