ಧಾರವಾಡ

ವಾರ್ಷಿಕ ಸ್ನೇಹ ಸಮ್ಮೇಳನ

Published On :

ಹುಬ್ಬಳ್ಳಿ: ಶಿಕ್ಷಕರಿಂದ ಮಾತ್ರ ಸಮಾಜದ ಆರೋಗ್ಯ ಕಾಪಾಡಲು ಸಾಧ್ಯ. ಶಿಕ್ಷಣದಿಂದ ಉತ್ತಮ ವ್ಯಕ್ತಿಗಳಾಗುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ ಎಂದು ಕರ್ನಾಟಕ ವಿಶ್ವವಿದ್ಯಾಲಯ ಕೌಸಾಳಿ ಇನ್ಸಿಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ನಿರ್ದೇಶಕ ಡಾ. ಎ.ಎಚ್. ಚಚಡಿ ಹೇಳಿದರು. ಎಸ್‌ಜೆಎಂವಿಎಸ್ ಮಹಿಳಾ ಬಿಬಿಎ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಅವರು ಮಾತನಾಡಿದರು.  ಪದವಿ ಶಿಕ್ಷಣದ ನಂತರ ಮುಂದೇನು ಎಂದು ಮಹಿಳಾ ವಿದ್ಯಾರ್ಥಿಗಳು ಚಿಂತಿಸುತ್ತಿದ್ದರೆ, ಅದಕ್ಕೆ ವ್ಯತಿರಿಕ್ತವಾಗಿ ಪೋಷಕರು ಹೆಣ್ಣುಮಕ್ಕಳ ವಿವಾಹದ ಬಗ್ಗೆ ಚಿಂತಿಸುತ್ತಾರೆ. ವಿವಾಹದ ನಂತರವೂ ಶಿಕ್ಷಣ ಮುಂದುವರಿಸುವುದಕ್ಕೆ ಸಾಕಷ್ಟು ಅವಕಾಶಗಳಿವೆ ಎಂದರು. ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಘದ ಗೌರವ ಕಾರ್ಯದರ್ಶಿ ಅರವಿಂದ ಕುಬಸದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಪ್ರಾಚಾರ್ಯೆ ಮಂಜುಳಾ ಮ್ಯಾಥ್ಯೂ ವಾರ್ಷಿಕ ವರದಿ ವಾಚಿಸಿದರು. ವೈಷ್ಣವಿ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಅನಿಷಾ ಮೆಹತಾ ಸ್ವಾಗತಿಸಿದರು. ಪ್ರಾಧ್ಯಾಪಕಿ ರೀಟಾ ಜೆನ್ನಿಫರ್ ಪರಿಚಯಿಸಿದರು. ಇದೇ ಸಂದರ್ಭದಲ್ಲಿ ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಸ್ವರ್ಣ ಪದಕ ನೀಡಿ ಗೌರವಿಸಲಾಯಿತು. ಪೂಜಾ ಮೆಹತಾ ಮತ್ತು ಅನಿಷಾ ಮೆಹತಾಗೆ ಉತ್ತಮ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ನೀಡಲಾಯಿತು. ವೇದಿಕೆಯಲ್ಲಿ ಪ್ರೀತಿ ಕುಲಕರ್ಣಿ, ಅನಿಷಾ ಮೆಹತಾ ಮತ್ತು ಎಜಿಎಸ್ ಭಾಗ್ಯಶ್ರೀ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.