ಸಿಬಿಎಸ್ಇ: ಶೇ. 100
ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ವಿಟ್ಲ ತಾಲೂಕಿನ ಸತ್ಯಸಾಯಿ ಲೋಕಸೇವಾ ಸಂಸ್ಥೆಯ ಸತ್ಯಸಾಯಿ ವಿದ್ಯಾ ಕೇಂದ್ರದ ಅಳಕೆ ಹೈಸ್ಕೂಲ್ನ ವಿದ್ಯಾರ್ಥಿ ಶುಭಾಂಕ ಜಿ. ಹೂಗಾರ, ಸಿಬಿಎಸ್ಇ ಪರೀಕ್ಷೆಯಲ್ಲಿ ನೂರಕ್ಕೆ ನೂರಷ್ಟು ಅಂಕ ಪಡೆದು ಸಾಧನೆಗೈದಿದ್ದು, ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ.
ಪ್ರಸಾದ ಅಬ್ಬಯ್ಯಗೆ ಪಾಪು ಮಾರ್ಗದರ್ಶನ
ಹುಬ್ಬಳ್ಳಿ: ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಕೆಲಸ ಮಾಡಿದರೆ ಮತ್ತೊಮ್ಮೆ ತಮ್ಮ ಪ್ರತಿನಿಧಿಯನ್ನಾಗಿ ಆಯ್ಕೆ ಮಾಡುವುದಕ್ಕೆ ಹಿಂದೇಟು ಹಾಕುವುದಿಲ್ಲ ಎಂದು ನಾಡೋಜ ಪಾಟೀಲ ಪುಟ್ಟಪ್ಪ ಹೇಳಿದ್ದಾರೆ. ಇತ್ತೀಚೆಗೆ ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಪ್ರಸಾದ್ ಅಬ್ಬಯ್ಯ ಅವರು ನಾಡೋಜ ಪಾಪು ಅವರನ್ನು ಭೇಟಿಯಾದ ಸಂದರ್ಭದಲ್ಲಿ ಮಾರ್ಗದರ್ಶನ ಮಾಡಿದ ಪತ್ರಕರ್ತ ಸಾಹಿತಿ ಪಾಪು ಅವರು ಜೀವನದಲ್ಲಿ ಹೋರಾಟ ಮತ್ತು ಜನಪರ ಕಾಳಜಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಾಜಶೇಖರ ಮೆಣಸಿನಕಾಯಿ, ಧಾರವಾಡ ಲೋಕಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಮೋಹನ ಅಸುಂಡಿ, ಮಂಜುನಾಥ ಅಬ್ಬಯ್ಯ, ವಿಶ್ವನಾಥ ಪಾಟೀಲ, ರಘುಪ್ರಭಾಕರ್ ಮತ್ತು ಅಲ್ಲಾಸಾಬ್ ಪಿಂಜಾರ ಸೇರಿದಂತೆ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

